ಗುರುವಾರ , ಆಗಸ್ಟ್ 11, 2022
27 °C

ಆರ್‌ಜಿಸಿಬಿ ಕ್ಯಾಂಪಸ್‌ಗೆ ಗೋಲ್ವಾಲ್ಕರ್ ಹೆಸರು: ಸಚಿವ ಮುರಳೀಧರನ್ ಸಮರ್ಥನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರ : ಇಲ್ಲಿನ ರಾಜೀವ್‌ಗಾಂಧಿ ಜೈವಿಕ ತಂತ್ರಜ್ಞಾನ ಕೇಂದ್ರದ (ಆರ್‌ಜಿಸಿಬಿ) ಎರಡನೇ ಕ್ಯಾಂಪಸ್‌ಗೆ   ಆರ್‌ಎಸ್ಎಸ್‌ ಚಿಂತಕ ಎಂ.ಎಸ್‌. ಗೋಲ್ವಾಲ್ಕರ್ ಅವರ ಹೆಸರಿಡುವ ನಿರ್ಧಾರವನ್ನು ಕೇಂದ್ರ ಸಚಿವ ವಿ.ಮುರಳೀಧರನ್ ಅವರು ಸಮರ್ಥಿಸಿಕೊಂಡಿದ್ದಾರೆ.

ಗೋಲ್ವಾಲ್ಕರ್ ಹೆಸರಿಡುವ ಕೇಂದ್ರ ಸರ್ಕಾರದ ತೀರ್ಮಾನವು ವಿವಾದಕ್ಕೆ ಆಸ್ಪದವಾದ ಹಿಂದೆಯೇ ಈ ಕುರಿತು ಹೇಳಿಕೆ ನೀಡಿರುವ ಅವರು, ‘ಕ್ಯಾಂಪಸ್‌ಗೆ ದೇಶಭಕ್ತನ ಹೆಸರಿಡುವುದರಲ್ಲಿ ತಪ್ಪೇನಿದೆ?’ ಎಂದು ಪ್ರಶ್ನಿಸಿದ್ದಾರೆ.

ಗೋಲ್ವಾಲ್ಕರ್ ಅವರು ಬನಾರಸ್‌ ವಿಶ್ವವಿದ್ಯಾಲಯದಲ್ಲಿ ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದರು ಎಂದು ಹೇಳಿದ ಅವರು, ‘ಬೋಟ್‌ ರೇಸ್‌ಗೆ ಮಾಜಿ ಪ್ರಧಾನಿ ಜವಹರಲಾಲ್‌ ನೆಹರೂ ಹೆಸರಿಟ್ಟಿದ್ದು ಏಕೆ. ನೆಹರೂ ಯಾವುದಾದರೂ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರೆ’ ಎಂದೂ ಅವರು ಪ್ರಶ್ನೆ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.