ಮಂಗಳವಾರ, ಅಕ್ಟೋಬರ್ 27, 2020
22 °C

ಮದರಸಾ, ಸಂಸ್ಕೃತ ಶಾಲೆ ಮುಚ್ಚಲು ಅಸ್ಸಾಂ ಸರ್ಕಾರ ತೀರ್ಮಾನ

ಪಿಟಿಐ Updated:

ಅಕ್ಷರ ಗಾತ್ರ : | |

ಗುವಾಹಟಿ: ಸರ್ಕಾರದ ವತಿಯಿಂದ ನಡೆಯುತ್ತಿರುವ ಎಲ್ಲ ಮದರಸಾ ಮತ್ತು ಸಂಸ್ಕೃತ ಶಾಲೆಗಳನ್ನು ಮುಚ್ಚಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಅಧಿಸೂಚನೆಯನ್ನು ನವೆಂಬರ್‌ನಲ್ಲಿ ಹೊರಡಿಸಲಾಗುವುದು ಎಂದು ಅಸ್ಸಾಂ ಶಿಕ್ಷಣ ಸಚಿವ ಹಿಮಂತ ಬಿಸ್ವಶರ್ಮ ಶನಿವಾರ ತಿಳಿಸಿದ್ದಾರೆ.

ಮದರಸಾ ಶಿಕ್ಷಣ ಮಂಡಳಿಯನ್ನು ವಿಸರ್ಜಿಸಲಿದ್ದು, ಎಲ್ಲ ಮದರಸಾಗಳನ್ನು  ಪ್ರೌಢಶಾಲೆಗಳಾಗಿ ಪರಿವರ್ತಿಸಲಾಗುವುದು. ದೈನಿಕ ತರಗತಿಗಳಿಗಾಗಿ ಹೊಸದಾಗಿ ಪ್ರವೇಶ ಆಹ್ವಾನಿಸಲಾಗುವುದು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳಿಗೆ ಬಡ್ತಿ ನೀಡಲಾಗುವುದು. ಆದರೆ, ಇನ್ನು ಮುಂದೆ ಎಲ್ಲ ವಿದ್ಯಾರ್ಥಿಗಳು ಸಾಮಾನ್ಯ ತರಗತಿಯಲ್ಲಿ ಕಲಿಯುವುದು ಕಡ್ಡಾಯ ಎಂದರು.

ಅಂತೆಯೇ, ಸಂಸ್ಕೃತ ಶಿಕ್ಷಣ ಸಂಸ್ಥೆಗಳನ್ನು ಕುಮಾರ ಭಾಸ್ಕರವರ್ಮಾ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಸೇರಿಸಲಾಗುವುದು. ಈ ಸಂಸ್ಥೆಗಳನ್ನು ಭಾರತೀಯ ಸಂಸ್ಕೃತಿಯ ಕಲಿಕೆ ಮತ್ತು ಸಂಶೋಧನಾ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ವಿವರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು