ಮಂಗಳವಾರ, ಜೂನ್ 28, 2022
27 °C

ಲಸಿಕೆ ಪ್ರಮಾಣಪತ್ರದಲ್ಲಿ ವೈಯಕ್ತಿಕ ವಿವರ ತಿದ್ದಲು ಅವಕಾಶ: ಕೇಂದ್ರ ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ ಲಸಿಕೆ ಹಾಕಿಸಿಕೊಂಡ ನಂತರ ನೀಡಲಾಗಿರುವ ಪ್ರಮಾಣಪತ್ರದಲ್ಲಿ ನಮೂದಾಗಿರುವ ವೈಯಕ್ತಿಕ ವಿವರಗಳಲ್ಲಿ ತಿದ್ದುಪಡಿಗೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿದೆ.

ಫಲಾನುಭವಿಗಳು ‘ಕೋವಿನ್‌’ ವೆಬ್‌ಸೈಟ್‌ಗೆ ಭೇಟಿ ನೀಡಿ ತಿದ್ದುಪಡಿಗಳನ್ನು ಮಾಡಬಹುದು. ಲಸಿಕೆ ಪ್ರಮಾಣಪತ್ರದಲ್ಲಿ ಹೆಸರು, ಜನ್ಮದಿನಾಂಕ, ಲಿಂಗ ಸೇರಿದಂತೆ ಇತರ ವಿವರಗಳು ತಪ್ಪಾಗಿ ನಮೂದಾಗಿದ್ದರೆ ಅವುಗಳನ್ನು ಸರಿಪಡಿಸಬಹುದು ಎಂದು ಆರೋಗ್ಯ ಸೇತು ಆ್ಯಪ್‌ನ ಟ್ವಿಟರ್‌ ಖಾತೆಯಲ್ಲಿ ಬುಧವಾರ ತಿಳಿಸಲಾಗಿದೆ.

‘ಕೋವಿನ್‌ ಲಸಿಕೆ ಪ್ರಮಾಣಪತ್ರ’ವನ್ನು ಪ್ರಯಾಣದ ಸಂದರ್ಭದಲ್ಲಿ ಹಾಗೂ ಇತರ ಕೆಲವು ನಿರ್ದಿಷ್ಟ ಸೇವೆಗಳನ್ನು ಪಡೆಯುವಾಗ ಹಾಜರುಪಡಿಸಬೇಕಾಗುತ್ತದೆ.

‘ಕೋವಿನ್‌’ ಪೋರ್ಟಲ್‌ನಲ್ಲಿ ನೋಂದಣಿ ಸಮಯದಲ್ಲಿ ನೀಡಿರುವ ಮೊಬೈಲ್‌ ಸಂಖ್ಯೆಯನ್ನು ಬಳಸಿ ಲಸಿಕೆಯ ಎಷ್ಟನೇ ಡೋಸ್‌ ಪಡೆಯಲಾಗಿದೆ ಎಂಬ ವಿವರವನ್ನು ಸಹ ಅಪ್‌ಡೇಟ್‌ ಮಾಡಬಹುದು ಎಂದೂ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು