ಸೋಮವಾರ, ಆಗಸ್ಟ್ 8, 2022
22 °C

ಈಗ ಗುಜರಾತ್‌ ಬದಲಾಗಲಿದೆ: ಅಹಮದಾಬಾದ್‌ ಭೇಟಿಗೂ ಮುನ್ನ ಕೇಜ್ರಿವಾಲ್‌ ಟ್ವೀಟ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: 2022ರ ಗುಜರಾತ್ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಇಂದು(ಸೋಮವಾರ) ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಈ ವಿಚಾರವಾಗಿ ಗುಜರಾತಿ ಭಾಷೆಯಲ್ಲಿ ಟ್ವೀಟ್‌ ಮಾಡಿರುವ ಅವರು, 'ನಾಳೆ ನಾನು ಗುಜರಾತ್‌ಗೆ ಬರಲಿದ್ದೇನೆ. ಎಲ್ಲ ಸಹೋದರ ಮತ್ತು ಸಹೋದರಿಯರನ್ನು ಭೇಟಿಯಾಗಲಿದ್ದೇನೆ. ಈಗ ಗುಜರಾತ್‌ ಬದಲಾಗಲಿದೆ' ಎಂದು ತಿಳಿಸಿದ್ದಾರೆ.

ಭೇಟಿಯ ಸಂದರ್ಭದಲ್ಲಿ ಅರವಿಂದ್‌ ಕೇಜ್ರಿವಾಲ್ ಅವರು ಆಮ್‌ ಆದ್ಮಿ ಪಕ್ಷದ ರಾಜ್ಯ ಕಚೇರಿಯನ್ನು ಅಹಮದಾಬಾದ್‌ನಲ್ಲಿ ಉದ್ಘಾಟಿಸಲಿದ್ದಾರೆ.

ಫೆಬ್ರವರಿಯಲ್ಲಿ ನಡೆದ ಗುಜರಾತ್‌ನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಎಪಿ ಗಮನಾರ್ಹ ಸಾಧನೆ ಮಾಡಿತ್ತು. ಸೂರತ್ ಮುನ್ಸಿಪಲ್ ಕಾರ್ಪೋರೇಷನ್‌ಗೆ (ಎಸ್‌ಎಂಸಿ) ನಡೆದ ಚುನಾವಣೆಯಲ್ಲಿ ಎಎಪಿ 27 ಸ್ಥಾನಗಳಲ್ಲಿ ಜಯಭೇರಿ ಮೊಳಗಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು