ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವೊವ್ಯಾಕ್ಸ್‌: ಎನ್‌ಟಿಎಜಿಐಯಿಂದ ಮಾಹಿತಿ ಪರಿಶೀಲನೆ

12 ವರ್ಷ ಹಾಗೂ ಮೇಲ್ಪಟ್ಟ ವಯೋಮಾನದವರಿಗೆ ಲಸಿಕೆ
Last Updated 30 ಮಾರ್ಚ್ 2022, 14:37 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌ ಲಸಿಕೆ ‘ಕೋವೊವ್ಯಾಕ್ಸ್‌’ ಅನ್ನು12 ವರ್ಷ ಹಾಗೂ ಮೇಲ್ಪಟ್ಟ ವಯೋಮಾನದವರಿಗೆ ನೀಡುವ ಕುರಿತು ನಿರ್ಧಾರ ಕೈಗೊಳ್ಳುವ ಸಲುವಾಗಿ ಲಸಿಕೆಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಲು ಕೋವಿಡ್‌–19 ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್‌ಟಿಎಜಿಐ) ಮುಂದಾಗಿದೆ.

ಈ ಸಂಬಂಧ, ಎನ್‌ಟಿಎಜಿಐ ಸದಸ್ಯರನ್ನು ಒಳಗೊಂಡ ಸಮಿತಿಯು ಏಪ್ರಿಲ್‌ 1ರಂದು ಸಭೆ ನಡೆಸಲಿದೆ. ಕೋವೊವ್ಯಾಕ್ಸ್‌ ಅನ್ನು ಕೋವಿಡ್‌–19 ಲಸಿಕಾ ಕಾರ್ಯಕ್ರಮದಲ್ಲಿ ಸೇರ್ಪಡೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ಸಮಿತಿ ತನ್ನ ನಿರ್ಧಾರ ತಿಳಿಸಲಿದೆ ಎಂದು ಮೂಲಗಳು ಹೇಳಿವೆ.

ಪುಣೆ ಮೂಲದ ಸೀರಂ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಿಯಾ (ಎಸ್‌ಐಐ) ಈ ಲಸಿಕೆಯನ್ನು ಉತ್ಪಾದಿಸುತ್ತಿದೆ. ಈ ಲಸಿಕೆಯನ್ನು ವಯಸ್ಕರಿಗೆ ತುರ್ತು ಸಂದರ್ಭದಲ್ಲಿ ನೀಡಲು ಭಾರತೀಯ ಔಷಧ ಮಹಾನಿಯಂತ್ರಕರು (ಡಿಸಿಜಿಐ) ಕಳೆದ ವರ್ಷ ಡಿಸೆಂಬರ್ 28ರಂದು ಅನುಮತಿ ನೀಡಿದ್ದರು. ನಿರ್ದಿಷ್ಟ ಸನ್ನಿವೇಶಗಳಲ್ಲಿ 12ರಿಂದ 17 ವರ್ಷ ವಯೋಮಾನದವರಿಗೆ ನೀಡುವ ಸಂಬಂಧ ಮಾರ್ಚ್ 9ರಂದು ಅನುಮತಿ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT