ಗುರುವಾರ , ಅಕ್ಟೋಬರ್ 29, 2020
26 °C

ಕೋವಿಡ್‌: ಪರಮಾಣು ವಿಜ್ಞಾನಿ ಶೇಖರ್‌ ಬಸು ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Sekhar Basu

ಕೋಲ್ಕತ್ತ: ದೇಶದ ಹಿರಿಯ ಪರಮಾಣ ವಿಜ್ಞಾನಿ ಮತ್ತು ಪರಮಾಣ ಇಂಧನ ಆಯೋಗದ ಮಾಜಿ ಅಧ್ಯಕ್ಷ ಡಾ. ಶೇಖರ್‌ ಬಸು (68) ಅವರು ಗುರುವಾರ ನಿಧನರಾದರು. ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಜತೆಗೆ ಅವರು ಮೂತ್ರಪಿಂಡ ವೈಫಲ್ಯದಿಂದಲೂ ನರಳುತ್ತಿದ್ದರು ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಮೆಕಾನಿಕಲ್‌ ಎಂಜನಿಯರ್‌ ಆಗಿದ್ದ ಬಸು ಅವರು ದೇಶದ ಪರಮಾಣ ಶಕ್ತಿ ಕಾರ್ಯಕ್ರಮಕ್ಕೆ ಅಪಾರ ಕೊಡುಗೆ ನೀಡಿದ್ದರು. ಅವರ ಕೊಡುಗೆಯನ್ನು ಸ್ಮರಿಸಿ ಕೇಂದ್ರ ಸರ್ಕಾರ 2014ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. 

ಭಾರತದ ಮೊದಲ ಪರಮಾಣು-ಚಾಲಿತ ಜಲಾಂತರ್ಗಾಮಿ ನೌಕೆ ಐಎನ್ಎಸ್ ಅರಿಹಂತ್‌ಗೆ ಸಂಕೀರ್ಣವಾದ ರಿಯಾಕ್ಟರ್‌ ನಿರ್ಮಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು