ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಕೋವಿಡ್‌ ಪರಿಸ್ಥಿತಿ ನಿಯಂತ್ರಣದಲ್ಲಿದೆ: ಸತ್ಯೇಂದ್ರ ಜೈನ್‌

Last Updated 4 ಮೇ 2022, 12:37 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೂ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ತುಂಬಾ ಕಡಿಮೆ ಇದೆ. ಸದ್ಯ ಕೋವಿಡ್‌ ಪರಿಸ್ಥಿತಿ ಗಂಭೀರವಾಗಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ಬುಧವಾರ ಹೇಳಿದರು.

ಕೋವಿಡ್‌ ಪರಿಸ್ಥಿತಿ ಮೇಲೆ ಸರ್ಕಾರ ನಿಗಾ ವಹಿಸಿದೆ. ಪ್ರಸ್ತುತದ ಸ್ಥಿತಿಗಮನಿಸಿದರೆ ಕಠಿಣ ನಿರ್ಬಂಧಗಳನ್ನು ಹೇರುವ ಅಗತ್ಯವಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕೋವಿಡ್‌ ರೋಗಿಗಳ ಚಿಕಿತ್ಸೆಗೆ 10,000 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಇದರಲ್ಲಿ 200 ಹಾಸಿಗೆ ಮಾತ್ರ ಭರ್ತಿಯಾಗಿದೆ. ಇದು ಕೋವಿಡ್‌ ನಿಯಂತ್ರಣದಲ್ಲಿದೆ ಎಂಬುದಕ್ಕೆ ಉತ್ತಮ ನಿದರ್ಶನ ಎಂದು ಹೇಳಿದರು.

ದೆಹಲಿ ಸರ್ಕಾರ ಕೋವಿಡ್‌ ಪತ್ತೆ ಪರೀಕ್ಷೆಯನ್ನು ಹೆಚ್ಚಳ ಮಾಡಿದೆ. ಪ್ರತಿನಿತ್ಯ ಸರಾಸರಿ 1,200– 1,500 ಹೊಸ ಪ್ರಕರಣಗಳು ವರದಿಯಾಗುತ್ತಿವೆ. ಸೋಂಕು ದೃಢ ಪ್ರಮಾಣ ಶೇ 5–6 ರಷ್ಟಿದೆ. ಮಂಗಳವಾರ 1,414 ಹೊಸ ಪ್ರಕರಣಗಳು ವರದಿಯಾಗಿವೆ. ದೆಹಲಿಯ ಒಟ್ಟು ಸೋಂಕಿತರ ಸಂಖ್ಯೆ 18,87,050ಕ್ಕೆ ಏರಿಕೆಯಾಗಿದ್ದು, ಇದುವರೆಗೆ 26,176 ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT