ಗುರುವಾರ , ಜನವರಿ 20, 2022
15 °C

ಕೋವಿಡ್‌ ಲಸಿಕೆ: ಭಾಗಶಃಕ್ಕಿಂತ ಎರಡೂ ಡೋಸ್‌ ಪಡೆದವರ ಸಂಖ್ಯೆ ಅಧಿಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಲ್ಲಿ ಕೋವಿಡ್‌ ಲಸಿಕೆಯನ್ನು ಪಡೆಯಲು ಅರ್ಹರಾದವರಲ್ಲಿ ಒಂದು ಡೋಸ್‌ ಪಡೆದವರಿಗಿಂತ ಎರಡು ಡೋಸ್‌ಗಳನ್ನು ಪಡೆದವರ ಸಂಖ್ಯೆ ಇದೇ ಮೊದಲ ಬಾರಿಗೆ ಅಧಿಕವಾಗಿರುವುದು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಬುಧವಾರ ಹೇಳಿದರು.

‘ಜನರ ಪಾಲ್ಗೊಳ್ಳಿವಿಕೆ’ ಎಂಬ ಧ್ಯೇಯದಿಂದ ಕೂಡಿದ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ, ಸರ್ಕಾರದಲ್ಲಿ ಜನರು ಹೊಂದಿರುವ ವಿಶ್ವಾಸ ಹಾಗೂ ಪ್ರಸಕ್ತ ನಡೆಯುತ್ತಿರುವ ‘ಹರ್ ಘರ್ ದಸ್ತಕ್‌’ ಅಭಿಯಾನದಿಂದಾಗಿ ಈ ಸಾಧನೆ ಸಾಧ್ಯವಾಗಿದೆ’ ಎಂದು ಅವರು ಹೇಳಿದ್ದಾರೆ.

ಬುಧವಾರ ಬೆಳಿಗ್ಗೆ 7ಕ್ಕೆ ಸಿದ್ಧಪಡಿಸಲಾದ ತಾತ್ಕಾಲಿಕ ವರದಿ ಪ್ರಕಾರ, ದೇಶದಲ್ಲಿ ಈ ವರೆಗೆ 113.68 ಕೋಟಿ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು