ನವದೆಹಲಿ: ದೇಶದಲ್ಲಿ ಈವರೆಗೆ 96 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಶನಿವಾರ 90 ಮಂದಿಯಲ್ಲಿ ರೂಪಾಂತರಗೊಂಡ ಸೋಂಕು ಪತ್ತೆಯಾಗಿತ್ತು. ಆದರೆ ಇದೀಗ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.

‘ಎಲ್ಲ ಸೋಂಕಿತರನ್ನು ಆಯಾ ರಾಜ್ಯ ಸರ್ಕಾರಗಳು ಗೊತ್ತುಪಡಿಸಿದ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ. ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್ ಮಾಡಲಾಗಿದೆ. ಸೋಂಕಿತರ ಜತೆಗೆ ಪ್ರಯಾಣಿಸಿದವರು, ಸಂಪರ್ಕಕ್ಕೆ ಬಂದ ಕುಟುಂಬದವರನ್ನು ಪತ್ತೆ ಹಚ್ಚಲಾಗುತ್ತಿದೆ’ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸೋಂಕು ಪ್ರಸರಣನ್ನು ತಡೆಯುವ ನಿಟ್ಟಿನಲ್ಲಿ ಕಣ್ಗಾವಲು ಇಡಲು ಮತ್ತು ನಿಯಂತ್ರಣ ಕ್ರಮಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಲಾಗಿದೆ. ಮಾದರಿಗಳನ್ನು ಐಎನ್ಎಸ್ಎಸಿಒಜಿ ಪ್ರಯೋಗಾಲಯಕ್ಕೆ ಕಳುಹಿಸುವಂತೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.