ಮಂಗಳವಾರ, ಸೆಪ್ಟೆಂಬರ್ 21, 2021
21 °C

ವಿಶ್ವದಲ್ಲೇ ಅತಿ ಹೆಚ್ಚು ಜನರಿಗೆ ಕೋವಿಡ್ ಲಸಿಕೆ ನೀಡಿದ ರಾಷ್ಟ್ರ ಭಾರತ: ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನರಿಗೆ ಕೋವಿಡ್–19 ಲಸಿಕೆ ನೀಡಿದ ರಾಷ್ಟ್ರವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ಒಟ್ಟು 75.89 ಕೋಟಿಗೂ ಹೆಚ್ಚು ಮಂದಿಗೆ ಈವರೆಗೆ ಲಸಿಕೆ ನೀಡಲಾಗಿದೆ.

ಓದಿ: 

ಸಚಿವಾಲಯದ ವೆಬ್‌ಸೈಟ್‌ನಲ್ಲಿ ನೀಡಿರುವ ಮಾಹಿತಿ ಪ್ರಕಾರ, ಮಂಗಳವಾರದ ವೇಳೆಗೆ ಗ್ರಾಮೀಣ ಪ್ರದೇಶಗಳ ಲಸಿಕಾ ಕೇಂದ್ರಗಳಲ್ಲಿ ಶೇ 62.54 ಮತ್ತು ನಗರ ಪ್ರದೇಶಗಳ ಲಸಿಕಾ ಕೇಂದ್ರಗಳಲ್ಲಿ ಶೇ 36.30ರಷ್ಟು ಲಸಿಕೆ ನೀಡಲಾಗಿದೆ.

ಈವರೆಗೆ ಶೇ 52.5ರಷ್ಟು ಪುರುಷರಿಗೆ, ಶೇ 47.5ರಷ್ಟು ಮಹಿಳೆಯರಿಗೆ ಹಾಗೂ ಶೇ 0.02ರಷ್ಟು ತೃತೀಯ ಲಿಂಗಿಗಳಿಗೆ ಲಸಿಕೆ ನೀಡಲಾಗಿದೆ.

ಈವರೆಗೆ ದೇಶದಲ್ಲಿ 18 ವರ್ಷ ಮೇಲ್ಪಟ್ಟ ಶೇ 60.7ರಷ್ಟು ಮಂದಿ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ.

ಓದಿ: 

‘ಕನಿಷ್ಠ ಒಂದು ಡೋಸ್ ಮತ್ತು ಎರಡೂ ಡೋಸ್‌ಗಳನ್ನು ಪಡೆದವರ ಸಂಖ್ಯೆ ವಿಶ್ವದಲ್ಲೇ ಭಾರತದಲ್ಲಿ ಹೆಚ್ಚು. ಸರಾಸರಿ ಲಸಿಕೆ ನೀಡಿಕೆಯೂ ನಮ್ಮಲ್ಲೇ ಹೆಚ್ಚಿದೆ’ ಎಂದು ಸಚಿವಾಲಯ ಹೇಳಿದೆ.

ಅಮೆರಿಕದಲ್ಲಿ 17.8 ಕೋಟಿ ಮಂದಿ ಎರಡೂ ಡೋಸ್ ಲಸಿಕೆ ಪಡೆದಿದ್ದರೆ, ಭಾರತದಲ್ಲಿ 18.1 ಕೋಟಿ ಮಂದಿ ಪಡೆದಿದ್ದಾರೆ. ಶೇ 100ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ. ಶೇ 81.1ರಷ್ಟು ಮುಂಚೂಣಿ ಕಾರ್ಯಕರ್ತರು ಎರಡನೇ ಡೋಸ್ ಪಡೆದಿದ್ದಾರೆ.

ಶೇ 98.8ರಷ್ಟು ಆರೋಗ್ಯ ಕಾರ್ಯಕರ್ತರು ಮೊದಲ ಡೋಸ್ ಲಸಿಕೆ ಪಡೆದಿದ್ದರೆ, ಶೇ 84.7ರಷ್ಟು ಆರೋಗ್ಯ ಕಾರ್ಯಕರ್ತರು ಎರಡೂ ಡೋಸ್‌ಗಳನ್ನೂ ಪಡೆದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು