ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಯೂಟ್ಯೂಬ್‌ ವಾಹಿನಿಗೆ ಒಂದು ಕೋಟಿ ದಾಟಿದ ಚಂದಾದಾರರು

Last Updated 1 ಫೆಬ್ರುವರಿ 2022, 14:51 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಯೂಟ್ಯೂಬ್‌ ಚಂದಾದಾರರ ಸಂಖ್ಯೆ ಒಂದು ಕೋಟಿ ದಾಟಿದೆ.ವಿವಿಧ ವೇದಿಕೆಗಳಲ್ಲಿ ಭಾರಿ ಅನುಯಾಯಿಗಳನ್ನು ಹೊಂದುವ ಮೂಲಕ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮದಲ್ಲಿ ಗಮನ ಸೆಳೆದಿದ್ದಾರೆ.

ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಯೂಟ್ಯೂಬ್‌ ವಾಹಿನಿಯಲ್ಲಿ 7 ಲಕ್ಷ ಅನುಯಾಯಿಗಳು, ಬ್ರೆಜಿಲ್‌ ಅಧ್ಯಕ್ಷ ಜೈಲ್‌ ಬೊಲ್ಸೊನಾರೊ 36 ಲಕ್ಷ, ಮೆಕ್ಸಿಕೊದ ಅಧ್ಯಕ್ಷ ಆಂಡ್ರೆಸ್‌ ಮಾನ್ಯಾಯೆಲ್‌ ಲೋಪೆಜ್‌ ಒಬ್ರಾಡೊರ್‌ 30.7 ಲಕ್ಷ, ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೊಡೊ 28.8 ಲಕ್ಷ ಮತ್ತು ಶ್ವೇತ ಭವನ 19 ಲಕ್ಷ ಅನುಯಾಯಿಗಳನ್ನು ಹೊಂದಿದೆ.

ಯೂಟ್ಯೂಬ್‌ ವಾಹಿನಿಯಲ್ಲಿ ರಾಷ್ಟ್ರೀಯ ನಾಯಕರಾದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ 5.25 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಸಂಸದ ಶಶಿ ತರೂರ್‌ ಅವರು ಸಹ 4.39 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT