ಬುಧವಾರ, ಅಕ್ಟೋಬರ್ 5, 2022
27 °C
ಪ್ರವಾದಿ ಮಹಮ್ಮದ್ ಕುರಿತ ಆಕ್ಷೇಪಾರ್ಹ ಹೇಳಿಕೆ ಪ್ರಕರಣ

ನೂಪುರ್ ಶರ್ಮಾ ವಿರುದ್ಧ ಎಲ್ಲ ಎಫ್‌ಐಆರ್ ದೆಹಲಿಗೆ ವರ್ಗಾಯಿಸಲು ‘ಸುಪ್ರೀಂ’ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಟಿ.ವಿ. ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮಹಮ್ಮದ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ದೇಶದಾದ್ಯಂತ ದಾಖಲಾಗಿರುವ ಎಲ್ಲ ಎಫ್‌ಐಆರ್‌ಗಳನ್ನು ಒಗ್ಗೂಡಿಸಿ ದೆಹಲಿ ಪೊಲೀಸರಿಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠವು, ದೆಹಲಿ ಪೊಲೀಸರಿಂದ ತನಿಖೆ ಮುಗಿಯುವವರೆಗೆ ನೂಪುರ್ ಶರ್ಮಾ ಅವರಿಗೆ ಮಧ್ಯಂತರ ರಕ್ಷಣೆಯನ್ನು ವಿಸ್ತರಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ದೆಹಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸಲು ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. 

ಎಲ್ಲಾ ಎಫ್ಐಆರ್‌ಗಳನ್ನು ದೆಹಲಿ ಪೊಲೀಸರ ಗುಪ್ತಚರ ಮತ್ತು ಕಾರ್ಯತಂತ್ರ ವಿಭಾಗವು (ಐಎಫ್‌ಎಸ್‌ಒ) ವಿಚಾರಣೆ ನಡೆಸಲಿದೆ ಎಂದೂ ಕೋರ್ಟ್ ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು