ಕಟಕ್: ಒಡಿಶಾ ರಾಜ್ಯದ ಕಟಕ್ ನಗರದ ಮಹಿಳಾ ಹಾಸ್ಟೆಲ್‌ನಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದ್ದು ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ಚಂಡಿಛಕ್ ಪ್ರದೇಶದಲ್ಲಿರುವ ಹಾಸ್ಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಆಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸುಮಾರು 30 ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಡುಗೆ ಅನಿಲ ಸಿಲಿಂಡರ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.