ಸೋಮವಾರ, ನವೆಂಬರ್ 30, 2020
20 °C

ದೀಪಾವಳಿಗೆ ಪಟಾಕಿ ಮಾರಾಟ, ಸುಡುವುದನ್ನು ನಿಷೇಧಿಸಿದ ಒಡಿಶಾ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ: ರಾಜಸ್ಥಾನ ಸರ್ಕಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮತ್ತು ಸುಡುವುದನ್ನು ನಿಷೇಧಿಸಿದ ಬೆನ್ನಲೇ, ಒಡಿಶಾ ಸರ್ಕಾರ ಕೂಡ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಕೋವಿಡ್-19 ಪರಿಣಾಮ ಈ ಕ್ರಮತೆಗೆದುಕೊಳ್ಳಲಾಗಿದೆ ಎಂದು ಓಡಿಶಾ ಸರ್ಕಾರ ತಿಳಿಸಿದೆ. ಪಟಾಕಿ ಸಿಡಿಸುವುದರಿಂದ ವಾಯು ಮಾಲಿನ್ಯ ಹೆಚ್ಚಾಗಿ ಉಸಿರಾಟಕ್ಕೆ ತೊಂದರೆಯಾಗುವುದರಿಂದ 2020ರ ನವೆಂಬರ್ 10 ರಿಂದ 30 ರವರೆಗೆ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ಸರ್ಕಾರ ನಿಷೇಧಿಸಿದೆ.

 ಪಟಾಕಿ ಸುಡುವುದರಿಂದ ನೈಟ್ರೆಸ್‌ ಆಕ್ಸೈಡ್, ಸಲ್ಫರ್ ಡೈಆಕ್ಸೈಡ್ ಹಾಗೂ ಕಾರ್ಬನ್ ಮಾನಾಕ್ಸೈಡ್ ನಂತಹ ಹಾನಿಕಾರಕ ರಾಸಾಯನಿಕಗಳು ಹೆಚ್ಚಿನ ಪ್ರಮಾಣದಲ್ಲಿ ಬಿಡುಗಡೆಯಾಗುವುದರಿಂದ ಅವು ಕೊರೊನಾ ಸೋಂಕಿತರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಪಟಾಕಿಯನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಸಾರ್ವಜನಿಕರು ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ - 2005 ಅಡಿ ಶಿಕ್ಷೆಗೆ ಅರ್ಹರೆಂದು ಸರ್ಕಾರ ಆದೇಶ ಹೊರಡಿಸಿದೆ.

ದೀಪಾವಳಿಯಂದು ಮಣ್ಣಿನ ದೀಪಗಳು ಮತ್ತು ಮೇಣದ ಬತ್ತಿಗಳನ್ನು ಹಚ್ಚುವ ಮೂಲಕ ಹಬ್ಬ ಆಚರಿಸುವಂತೆ ಒಡಿಶಾ ಸರ್ಕಾರ ಜನರಿಗೆ ಮನವಿ ಮಾಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು