ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ಯತ್ರಾರ್ಥಿಗಳಿಗಾಗಿ ಕೈಗೆಟಕುವ ದರದಲ್ಲಿ ವಸತಿ ಸೌಕರ್ಯ

Last Updated 20 ಡಿಸೆಂಬರ್ 2020, 6:44 IST
ಅಕ್ಷರ ಗಾತ್ರ

ಪುರಿ: ಒಡಿಶಾ ಸರ್ಕಾರವು ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಕೈಗೆಟಕುವ ಬೆಲೆಯಲ್ಲಿ ವಸತಿ ಸೌಕರ್ಯ ಒದಗಿಸಲು ಆಲೋಚಿಸಿದೆ. ಇದಕ್ಕೆ ಬೇಕಾದ ಸೌಕರ್ಯ ಒದಗಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.

ಮೂಲ ಸೌಕರ್ಯ, ವಾಸ್ತುಶಿಲ್ಪದ ಅಭಿವೃದ್ಧಿ ಕಾರ್ಯಕ್ರಮದ ಬಗ್ಗೆ ಪರಿಶೀಲಿಸಲು ಉನ್ನತ ಅಧಿಕಾರಿಗಳ ತಂಡವೊಂದು ದೇವಾಲಯಕ್ಕೆ ಶನಿವಾರ ಭೇಟಿ ನೀಡಿತ್ತು. ಈ ಬಳಿಕ ಶ್ರೀ ಜಗನ್ನಾಥ ದೇವಾಲಯದ ಆಡಳಿತ ಮಂಡಳಿಯ (ಎಸ್‌ಜೆಟಿಎ) ಮುಖ್ಯ ಆಡಳಿತಾಧಿಕಾರಿ ಕೃಶನ್‌ ಕುಮಾರ್‌ ಅವರು ಈ ಬಗ್ಗೆ ತಿಳಿಸಿದರು.

ಬಸೇಲಿಸಾಹಿ ಪೊಲೀಸ್ ಠಾಣೆ ಬಳಿಯ 9ರಿಂದ 10 ಎಕರೆ ಪ್ರದೇಶದಲ್ಲಿ ಯಾತ್ರಾರ್ಥಿಗಳಿಗಾಗಿ ವಸತಿ ಸೌಕರ್ಯವನ್ನು ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ಒಂದು ಹಾಸಿಗೆಯನ್ನು ₹100 ರಿಂದ ₹150 ಕ್ಕೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಜನವರಿ 3 ರಿಂದ ಜನಸಾಮಾನ್ಯರಿಗಾಗಿ ಜಗನ್ನಾಥ ದೇವಾಸ್ಥಾನದ ದ್ವಾರಗಳನ್ನು ತೆರೆಯಲಾಗುವುದು. ಈ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲು ಅಭಿವೃದ್ಧಿ ಆಯುಕ್ತ ಎಸ್‌.ಸಿ ಮೊಹಾಪಾತ್ರ, 5 ಟಿ ಕಾರ್ಯದರ್ಶಿ ವಿ.ಕೆ.ಪಾಂಡಿಯನ್ ಮತ್ತು ಇತರ ಹಿರಿಯ ಅಧಿಕಾರಿಗಳು ಶನಿವಾರ ಪುರಿಗೆ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT