ಒಡಿಶಾ ಆರೋಗ್ಯ ಸಚಿವ ನಬಾ ದಾಸ್ ಮೇಲೆ ಗುಂಡು ಹಾರಿಸಿದ ಎಎಸ್‌ಐ, ಗಂಭೀರ ಗಾಯ

ಭುವನೇಶ್ವರ: ಒಡಿಶಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ನಬಾ ಕಿಶೋರ್ ದಾಸ್ ಮೇಲೆ ಪೊಲೀಸ್ ಅಧಿಕಾರಿಯೊಬ್ಬರು ಗುಂಡು ಹಾರಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಝಾರಸುಗುಡ ಜಿಲ್ಲೆಯ ಬ್ರಜರಾಜನಗರ್ನ ಗಾಂಧಿ ಚೌಕ ಎಂಬಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಗೋಪಾಲ್ ಚಂದ್ರ ದಾಸ್ ಅವರು ಸಚಿವರ ಎದೆಗೆ ಗುಂಡು ಹಾರಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ನಬಾ ದಾಸ್ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಿಂದ ಕೆಳಗಿಳಿಯುವಾಗ ಈ ದಾಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುವುದು.
Odisha Health Minister Naba Das brought to a local hospital after being shot at by some unidentified assailants near Brajarajnagar in Jharsuguda district.
Details awaited pic.twitter.com/jUkyjWZwm4
— ANI (@ANI) January 29, 2023
VIDEO: #Odisha Health Minister Naba Das was shot by an ASI in Jharsuguda today. The minister was going to attend a programme at Gandhi Chowk in Brajarajnagar. The accused cop, identified as Gopal Das, was nabbed and detained by police for questioning. (Disturbing visuals) pic.twitter.com/L1USPM7cLT
— Press Trust of India (@PTI_News) January 29, 2023
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.