ಭಾನುವಾರ, ಸೆಪ್ಟೆಂಬರ್ 25, 2022
30 °C

ಸೆಪ್ಟೆಂಬರ್ 13ರ ವರೆಗೆ ಒಡಿಶಾದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಪಿಟಿಐ Updated:

ಅಕ್ಷರ ಗಾತ್ರ : | |

ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಒಡಿಶಾದಲ್ಲಿ ಸೆಪ್ಟೆಂಬರ್ 13ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಆಂಧ್ರ ಪ್ರದೇಶ ಹಾಗೂ ದಕ್ಷಿಣ ಒಡಿಶಾ ಕರಾವಳಿ ಪ್ರದೇಶದಲ್ಲಿ ಬಂಗಾಳ ಕೊಲ್ಲಿಯಲ್ಲಿ ಒತ್ತಡ ನಿರ್ಮಾಣವಾಗಿದೆ ಎಂದು ಇಲಾಖೆ ಹೇಳಿದೆ.

ಒಡಿಶಾದ ದಕ್ಷಿಣದ ಹಲವು ಜಿಲ್ಲೆಗಳಲ್ಲಿ ಶನಿವಾರ ಮತ್ತು ಭಾನುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮಲ್ಕಾನ್‌ಗಿರಿ, ಕೊರಪೂರ್, ನಭಾರಂಗ್‌ಪುರ, ರಾಯಗಡ, ನಯಾಗಡ ಹಾಗೂ ಕಟಕ್‌ಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ತುರ್ತು ಪರಿಸ್ಥಿತಿಗೆ ಸನ್ನದ್ಧವಾಗಿರುವಂತೆ ಆಯಾ ಜಿಲ್ಲಾ ಅಧಿಕಾರಿಗಳಿಗೆ ವಿಶೇಷ ಪರಿಹಾರ ಆಯುಕ್ತರು ಸೂಚನೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು