ಶುಕ್ರವಾರ, ಏಪ್ರಿಲ್ 16, 2021
30 °C

ಐದು ರಾಜ್ಯಗಳ ಪ್ರಯಾಣಿಕರಿಗೆ ಕೋವಿಡ್-19 ಪರೀಕ್ಷೆ ಕಡ್ಡಾಯಗೊಳಿಸಿದ ಒಡಿಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭುವನೇಶ್ವರ: ಮಹಾರಾಷ್ಟ್ರ, ಛತ್ತೀಸಗಡ, ಕೇರಳ, ಪಂಜಾಬ್‌, ಮಧ್ಯಪ್ರದೇಶ ರಾಜ್ಯಗಳಿಂದ ಬರುವ ಪ್ರಯಾಣಿಕರು ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವುದು ಕಡ್ಡಾಯವೆಂದು ಒಡಿಶಾ ಸರ್ಕಾರ ಸೂಚಿಸಿದೆ.

ʼಮಹಾರಾಷ್ಟ್ರ, ಛತ್ತೀಸಗಡ, ಕೇರಳ, ಪಂಜಾಬ್‌, ಮಧ್ಯಪ್ರದೇಶ ರಾಜ್ಯಗಳಿಂದ ಬರುವ ಪ್ರಯಾಣಿಕರು ಒಡಿಶಾದ ವಿಮಾನ ನಿಲ್ದಾಣದಲ್ಲಿಯೇ ಪರೀಕ್ಷೆಗೆ ಒಳಗಾಗಲಿದ್ದಾರೆ. ಪಾಸಿಟಿವ್‌ ವರದಿ ಬಂದವರು ಪ್ರತ್ಯೇಕವಾಸದಲ್ಲಿದ್ದು, ಚಿಕಿತ್ಸೆ ಪಡೆಯಲಿದ್ದಾರೆʼ ಎಂದು ಆರೋಗ್ಯ ಸಚಿವ ನಬಾ ಕಿಶೋರ್‌ ದಾಸ್‌ ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕೋವಿಡ್-19 ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಬೆಂಬಲಿಸುವ ಸಲುವಾಗಿ ಉನ್ನತ ಮಟ್ಟದ ಶಿಸ್ತುಪಾಲನಾ ತಂಡಗಳನ್ನು ಮಹಾರಾಷ್ಟ್ರ, ಕೇರಳ, ಚತ್ತೀಸಗಢ, ಮಧ್ಯಪ್ರದೇಶ, ಗುಜರಾತ್, ಪಂಜಾಬ್, ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಜಮ್ಮು ಕಾಶ್ಮೀರಕ್ಕೆ ನಿಯೋಜಿಸಿದೆ. 

ಅಧಿಕೃತ ಮೂಲಗಳ ಪ್ರಕಾರ, ಮೂವರು ಸದಸ್ಯರಿರುವ ಶಿಸ್ತುಪಾಲನಾ ತಂಡಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿವೆ. ಇತ್ತೀಚೆಗೆ ಸೋಂಕು ಪ್ರಕರಣಗಳು ಏರುತ್ತಿರುವುದಕ್ಕೆ ಕಾರಣಗಳನ್ನು ಕಂಡುಕೊಳ್ಳಲು ಅಧ್ಯಯನ ನಡೆಸಲಿವೆ. ಸೋಂಕು ಪ್ರಕರಣಗಳು ಹೆಚ್ಚಾಗದಂತೆ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲಿವೆ ಎನ್ನಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು