ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಡಿಶಾ: ಜನರ ಮೇಲೆ ಹರಿದ ಶಾಸಕನ ವಾಹನ, 22 ಮಂದಿಗೆ ಗಾಯ

Last Updated 12 ಮಾರ್ಚ್ 2022, 15:56 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ಚಿಲಿಕಾ ಕ್ಷೇತ್ರದ ಬಿಜೆಡಿ ಶಾಸಕ ಪ್ರಶಾಂತ್ ಜಗದೇವ್ ಅವರ ವಾಹನ ಜನರ ಮೇಲೆ ಹರಿದು ಏಳು ಪೊಲೀಸ್ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಘಟನೆಯ ಬಳಿಕ ಕೋಪೋದ್ರಿಕ್ತಗೊಂಡಜನರ ಗುಂಪು, ಶಾಸಕನಿಗೆ ಥಳಿಸಿದ್ದಾರೆ. ಪರಿಣಾಮ ತೀವ್ರವಾಗಿ ಗಾಯಗೊಂಡಿರುವ ಶಾಸಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬ್ಲಾಕ್ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತಿದ್ದಾಗ ಬಾಣಾಪುರ ಬಿಡಿಒ ಕಚೇರಿಯ ಹೊರಗಡೆ ಜನರು ಜಮಾಯಿಸಿದ್ದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಬಾಣಾಪುರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಆರ್. ಆರ್. ಸಾಹು ಕೂಡ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಭುವನೇಶ್ವರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಜೆಪಿಯ ಸುಮಾರು 15 ಕಾರ್ಯಕರ್ತರು ಮತ್ತು ಏಳು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರಕರಣದ ಸಂಬಂಧ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕಳೆದ ವರ್ಷ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಜಗದೇವ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT