ಮಂಗಳವಾರ, ಅಕ್ಟೋಬರ್ 20, 2020
21 °C

ಹಿರಿಯ ಕಾಂಗ್ರೆಸ್‌ ನಾಯಕ ಕಾರ್ತಿಕೇಶ್ವರ ಪಾತ್ರ ನಿಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಬಾಲಾಸೋರ್(ಒಡಿಶಾ): ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಂಸದ, ಲೇಖಕ ಕಾರ್ತಿಕೇಶ್ವರ ಪಾತ್ರ(79) ಅವರು  ಸೋಮವಾರ ರಾತ್ರಿ ನಿಧನರಾದರು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾದ್ದ ಅವರನ್ನು ಭುವನೇಶ್ವರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಕೊನೆ ಉಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್ ಮತ್ತು ಇತರ ಗಣ್ಯರು ಪಾತ್ರ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪಾತ್ರ ಅವರು 1971, 1974 ಮತ್ತು 1980ರಲ್ಲಿ ಮೂರು ಬಾರಿ ಭೋಗ್ರೈ ಕ್ಷೇತ್ರದಿಂದ ಒಡಿಶಾ ವಿಧಾನಸಭೆಗೆ ಆಯ್ಕೆಯಾಗಿದ್ದರು. 1991 ರಲ್ಲಿ ಬಾಲಾಸೋರ್ ಕ್ಷೇತದಿಂದ ಲೋಕಸಭೆಗೂ ಆಯ್ಕೆಯಾಗಿದ್ದರು. ಅಲ್ಲದೆ ಅವರು ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಯಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ. ಬರಹಗಾರರೂ ಆಗಿದ್ದ ಕಾರ್ತಿಕೇಶ್ವರ ಪಾತ್ರ ಅವರು ಹಲವು ಕೃತಿಗಳನ್ನೂ ರಚಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು