ಶನಿವಾರ, ನವೆಂಬರ್ 28, 2020
17 °C

ಜೈಪುರ: ವಿಷಾಹಾರ ಸೇವಿಸಿ 78 ಹಸುಗಳು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ಚುರು ಜಿಲ್ಲೆಯ ಸರ್ಕಾರಿ ಅನುದಾನಿತ ಗೋಶಾಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ವಿಷಾಹಾರ ಸೇವಿಸಿ 78 ಹಸುಗಳು ಸಾವನ್ನಪ್ಪಿವೆ ಎಂದು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿಯಿಂದ 78 ಹಸುಗಳು ಮೃತಪಟ್ಟಿದ್ದು, ಕೆಲವು ಕಾಯಿಲೆಗಳಿಂದ ಸಾವನ್ನಪ್ಪಿರುವ ಶಂಕೆ ಇದೆ ಎಂದು ಪಶು ಸಂಗೋಪನಾ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಗದೀಶ್‌ ಹೇಳಿದ್ದಾರೆ.

ಗೋಶಾಲೆಗೆ ಈಗಾಗಲೇ ಹಲವು ತಂಡಗಳು ಭೇಟಿ ನೀಡಿದ್ದು, ಹಸುಗಳ ಸಾವಿನ ಬಗ್ಗೆ ತಪಾಸಣೆ ನಡೆಸಲಾಗುತ್ತಿವೆ. ಮೇವಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು