ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13 ತಿಂಗಳಲ್ಲಿ 8 ಮಕ್ಕಳಿಗೆ ಜನ್ಮ ಪ್ರಕರಣ: ಅಪರಾಧಿಗಳ ವಿರುದ್ಧ ಕ್ರಮ

ಬಿಹಾರ: ಹಣ ಲಪಟಾಯಿಸಲು ಸುಳ್ಳು ದಾಖಲೆ ಸೃಷ್ಟಿಸಿದ್ದ ಅಧಿಕಾರಿಗಳು
Last Updated 30 ಆಗಸ್ಟ್ 2020, 14:03 IST
ಅಕ್ಷರ ಗಾತ್ರ

ಮುಜಾಫರ್‌ಪುರ (ಬಿಹಾರ): ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್‌ (ಎನ್‌ಆರ್‌ಎಚ್‌ಎಂ) ಅಡಿಯಲ್ಲಿ ಹಣ ಲಪಟಾಯಿಸಲು 60 ವರ್ಷ ಮೇಲ್ಪಟ್ಟ ವೃದ್ಧೆಯರಿಗೆ ಮಕ್ಕಳಾಗಿರುವ ಸುಳ್ಳು ದಾಖಲೆ ಸೃಷ್ಟಿಸಿದ್ದ ಪ್ರಕರಣದಲ್ಲಿ ಸಂಬಂಧಿಸಿದವರ ವಿರುದ್ಧ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಪ್ರಕರಣದಲ್ಲಿ ಮುಸಹರಿ ಬ್ಲಾಕ್‌ನ ಅಧಿಕಾರಿ ಅವಧೇಶ್ ಕುಮಾರ್ ಅವರ ವಿರುದ್ಧದ ಆರೋಪ ತನಿಖೆಯಲ್ಲಿ ಸಾಬೀತಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಜಿಲ್ಲೆಯ ಇತರ ಬ್ಲಾಕ್‌ಗಳಲ್ಲೂ ಈ ರೀತಿಯ ಪ್ರಕರಣಗಳು ನಡೆದಿವೆಯೇ ಎಂಬುದರ ಕುರಿತು ತನಿಖೆ ನಡೆಸಲು ತಂಡಗಳನ್ನು ರಚಿಸಲಾಗಿದೆ. ವಾರದೊಳಗೆ ಈ ಸಂಬಂಧ ಕ್ರಮ ಕೈಗೊಳ್ಳಲಾಗುವುದು’ ಎಂದುಮುಜಾಫರ್‌ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರಶೇಖರ್ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 15 ದಿನಗಳ ಹಿಂದೆ ಪಿಎಚ್‌ಸಿ ಉಸ್ತುವಾರಿ ಅಧಿಕಾರಿಯೊಬ್ಬರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ‌ಪ್ರಕರಣ ಬಯಲಾಗುತ್ತಿದ್ದಂತೆ ಬಿಹಾರದ ಆರೋಗ್ಯ ಸಚಿವ ಮಂಗಲ ಪಾಂಡೆ, ತನಿಖೆಗಾಗಿ ನಾಲ್ಕು ಮಂದಿಯ ಸಮಿತಿಯನ್ನು ರಚಿಸಿದ್ದರು.

ಮುಜಾಫರ್‌ಪುರ ಜಿಲ್ಲೆಯಲ್ಲಿ 65 ವರ್ಷ ವಯಸ್ಸಿನ ವೃದ್ಧೆಯೊಬ್ಬರು 13 ತಿಂಗಳುಗಳಲ್ಲಿ ಎಂಟು ಮಕ್ಕಳಿಗೆ ಜನ್ಮ ನೀಡಿದ್ದರು ಎಂದು ಅಧಿಕಾರಿಗಳು ಸುಳ್ಳು ದಾಖಲೆ ಸೃಷ್ಟಿಸಿದ್ದರು. ನಂತರ ವೃದ್ಧೆಯರ ಬ್ಯಾಂಕ್ ಖಾತೆಗೆ ಸರ್ಕಾರ ಹಾಕಿದ್ದ ಹಣವನ್ನು ಲಪಟಾಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT