ಶನಿವಾರ, ಆಗಸ್ಟ್ 13, 2022
28 °C

ಸಂಸದರು ಫಲಪ್ರದ ಚರ್ಚೆಗಳಲ್ಲಿ ತೊಡಗುತ್ತಾರೆಂದು ಭಾವಿಸಿದ್ದೇನೆ: ಸ್ಪೀಕರ್‌

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಮುಂಬರುವ ಸಂಸತ್‌ ಅಧಿವೇಶನದಲ್ಲಿ ಎಲ್ಲ ಸಂಸದರು ಫಲಪ್ರದ ಚರ್ಚೆಗಳಲ್ಲಿ ತೊಡಗುತ್ತಾರೆಂದು ಭಾವಿಸಿರುವುದಾಗಿ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ತಿಳಿಸಿದ್ದಾರೆ.

ಈ ವಿಚಾರವಾಗಿ ಎಎನ್‌ಐ ಸುದ್ದಿಸಂಸ್ಥೆ ಜೊತೆ ಮಾತನಾಡಿರುವ ಅವರು, 'ಈ ಬಿಕ್ಕಟ್ಟಿನ ಸಮಯದಲ್ಲೂ ತಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಎತ್ತಿಹಿಡಿಯುವ ಪ್ರತಿಜ್ಞೆಯನ್ನು ಸದನದ ಸದಸ್ಯರು ತೆಗೆದುಕೊಂಡಿದ್ದಾರೆ. ಅಧಿವೇಶನದಲ್ಲಿ ಎಲ್ಲಾ ಸದಸ್ಯರು ಹಾಜರಿದ್ದು ಫಲಪ್ರದ ಚರ್ಚೆಗಳಲ್ಲಿ ತೊಡಗುತ್ತಾರೆ ಎಂಬುದಾಗಿ ನಾನು ಭಾವಿಸುತ್ತೇನೆ' ಎಂದು ಬಿರ್ಲಾ ಹೇಳಿದ್ದಾರೆ. 

ಕೋವಿಡ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸಂಸತ್‌ ಆವರಣದಲ್ಲಿ ಮಾಡಿದ ವ್ಯವಸ್ಥೆಗಳನ್ನು ಓಂ ಬಿರ್ಲಾ ಪರಿಶೀಲಿಸಿದ್ದಾರೆ. ಸಂಸತ್ತ ಅಧಿವೇಶನವು ಸೆಪ್ಟೆಂಬರ್ 14 ರಿಂದ ಪ್ರಾರಂಭವಾಗಲಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು