ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ಜೋಡೊ ಯಾತ್ರೆ: ರಾಹುಲ್ ಜತೆ ಹೆಜ್ಜೆ ಹಾಕಿದ ಒಮರ್‌ ಅಬ್ದುಲ್ಲಾ

Last Updated 27 ಜನವರಿ 2023, 9:52 IST
ಅಕ್ಷರ ಗಾತ್ರ

ಶ್ರೀನಗರ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯಲ್ಲಿ ಶುಕ್ರವಾರ ನ್ಯಾಷನಲ್‌ ಕಾನ್ಫರೆನ್ಸ್‌ ಉಪಾಧ್ಯಕ್ಷ ಒಮರ್‌ ಅಬ್ದುಲ್ಲಾ ಪಾಲ್ಗೊಂಡಿದ್ದಾರೆ.

ಕಾಶ್ಮೀರದ ಬನಿಹಾಲ್‌ ಮೂಲಕ ಯಾತ್ರೆ ಸಾಗುತ್ತಿದೆ. ಇದೇ ವೇಳೆ ಒಮರ್‌ ಅಬ್ದುಲ್ಲಾ, ರಾಹುಲ್ ಜತೆ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದಿದ್ದಾರೆ.

‘ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆಯನ್ನು ಅವರ ಇಮೇಜ್ ಹೆಚ್ಚಿಸಿಕೊಳ್ಳುವುದಕ್ಕಾಗಿ ನಡೆಸುತ್ತಿಲ್ಲ. ಬದಲಿಗೆ ದೇಶದ ಪರಿಸ್ಥಿತಿಯನ್ನು ಸುಧಾರಿಸಲು ನಡೆಸಲಾಗುತ್ತಿದೆ’ ಎಂದು ಒಮರ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ ರದ್ದತಿ ಬಗ್ಗೆ ಕಾಂಗ್ರೆಸ್‌ನ ನಿಲುವನ್ನು ಸ್ಪಷ್ಟಪಡಿಸುವಂತೆ ಒತ್ತಡ ಹೇರಲು ಬಯಸುವುದಿಲ್ಲ ಎಂದು ಒಮರ್ ತಿಳಿಸಿದ್ದಾರೆ.

2022 ಸೆಪ್ಟೆಂಬರ್ 7ರಂದು ಕನ್ಯಾಕುಮಾರಿಯಿಂದ ಆರಂಭವಾಗಿರುವ ಭಾರತ್ ಜೋಡೊ ಯಾತ್ರೆಯು ಜ.19ರಂದು ಕಾಶ್ಮೀರಕ್ಕೆ ಪ್ರವೇಶಿಸಿತ್ತು. ಯಾತ್ರೆ ಜನವರಿ 30ರಂದು ಶ್ರೀನಗರದಲ್ಲಿ ಕೊನೆಗೊಳ್ಳಲಿದೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ 12 ರಾಜ್ಯಗಳ ಮೂಲಕ ಹಾದುಹೋಗಿದ್ದು, 3570 ಕಿ.ಮೀ. ದೂರ ಕ್ರಮಿಸಲಿದೆ.

ಕೆಲಕಾಲ ಯಾತ್ರೆ ಸ್ಥಗಿತ: ಕಾಶ್ಮೀರದ ಬನಿಹಾಲ್‌ನಲ್ಲಿ ಭದ್ರತಾ ಲೋಪದಿಂದಾಗಿ ಭಾರತ್ ಜೋಡೊ ಯಾತ್ರೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. 20 ನಿಮಿಷದ ಬಳಿಕ ಯಾತ್ರೆ ಮತ್ತೆ ಆರಂಭಿಸಲಾಯಿತು ಎಂದು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT