ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಂಧ್ರ, ಚಂಡೀಗಢದಲ್ಲಿ ಓಮೈಕ್ರಾನ್ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆ

Last Updated 12 ಡಿಸೆಂಬರ್ 2021, 7:41 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಭಾನುವಾರ ಕೊರೊನಾ ವೈರಾಣುವಿನ ಹೊಸ ರೂಪಾಂತರ ತಳಿ ‘ಓಮೈಕ್ರಾನ್‌’ನ ಎರಡು ಪ್ರಕರಣಗಳು ದೃಢಪಟ್ಟಿವೆ.

ಆಂಧ್ರ ಪ್ರದೇಶ ಮತ್ತು ಚಂಡೀಗಢದಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಈವರೆಗೆ ಪತ್ತೆಯಾದ ಪ್ರಕರಣಗಳ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

34 ವರ್ಷದ ವ್ಯಕ್ತಿಯೊಬ್ಬರು ಐರ್ಲೆಂಡ್‌ನಿಂದ ಮುಂಬೈಗೆ ಬಂದಿದ್ದರು. ಬಳಿಕ ಆಂಧ್ರಪ್ರದೇಶಕ್ಕೆ ಪ್ರಯಾಣಿಸಿದ್ದರು. ಸದ್ಯ ಅವರ ವೈದ್ಯಕೀಯ ವರದಿಯಲ್ಲಿ ಓಮೈಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ನ.20ರಂದು ಇಟಲಿಯಿಂದ ಭಾರತಕ್ಕೆ ಬಂದಿದ್ದ 20 ವರ್ಷದ ಯುವಕನಿಗೆ ಓಮೈಕ್ರಾನ್ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಚಂಡೀಗಢದ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT