ಮಂಗಳವಾರ, ಜನವರಿ 18, 2022
23 °C

ಬೆಂಗಳೂರು ಮೂಲಕ ಭಾರತಕ್ಕೂ ಎಂಟ್ರಿ ಕೊಟ್ಟ ಓಮೈಕ್ರಾನ್:ಕರ್ನಾಟಕದ ಇಬ್ಬರಲ್ಲಿ ಪತ್ತೆ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾವೈರಸ್‌ನ ರೂಪಾಂತರಿ ತಳಿಯಾದ ಓಮೈಕ್ರಾನ್‌ (ಒಮಿಕ್ರಾನ್) ಭಾರತದಲ್ಲೂ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿನ ಇಬ್ಬರಲ್ಲಿ ಓಮೈಕ್ರಾನ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಕರ್ನಾಟಕದ ಇಬ್ಬರಲ್ಲಿ ಕೋವಿಡ್ ತಪಾಸಣೆ ಮಾಡಿದಾಗ ಕೋವಿಡ್ ದೃಢಪಟ್ಟಿತು. ಆದರೆ, ವೈರಸ್ ಬಗ್ಗೆ ಗೊಂದಲ ಇತ್ತು. ಐಸಿಎಂಆರ್‌ನಲ್ಲಿ ಜಿನೋಮಿಕ್ ಸಿಕ್ವೇನ್ಸಿಂಗ್ ತಪಾಸಣೆ ಮಾಡಿದಾಗ ಅದು ಕೊರೊನಾವೈರಸ್‌ನ ಹೊಸ ರೂಪಾಂತರವಾದ ಓಮೈಕ್ರಾನ್ ಎಂಬುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

 

66 ವರ್ಷದ ಒಬ್ಬ ವೃದ್ದನಲ್ಲಿ ಹಾಗೂ 44 ವರ್ಷದ ವ್ಯಕ್ತಿಯಲ್ಲಿ ಓಮೈಕ್ರಾನ್ ಇರುವುದು ಪತ್ತೆಯಾಗಿದೆ. ಈ ಇಬ್ಬರೂ ಕರ್ನಾಟಕದವರು ಎಂಬುದು ತಿಳಿದು ಬಂದಿದೆ. ಇದರಲ್ಲಿ ಒಬ್ಬರು ಬೆಂಗಳೂರಿನವರು ಎಂದು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಲವ ಅಗರವಾಲ್ ತಿಳಿಸಿದ್ದಾರೆ. ಅಲ್ಲದೇ ಈ ಬಗ್ಗೆ ಯಾರೂ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು