ಮಂಗಳವಾರ, ಜನವರಿ 18, 2022
23 °C

ಕೋವಿಡ್ ಓಮಿಕ್ರಾನ್: ಕಣ್ಗಾವಲು, ಪರೀಕ್ಷೆ ಹೆಚ್ಚಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

ಡೆಕ್ಕನ್ ಹೆರಾಲ್ಡ್ Updated:

ಅಕ್ಷರ ಗಾತ್ರ : | |

ನವದೆಹಲಿ: ವಿಶ್ವದಾದ್ಯಂತ ಕೋವಿಡ್‌ ಹೊಸ ತಳಿ ‘ಓಮಿಕ್ರಾನ್‌’ ಹರಡುವ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚಿಸಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಕೇಂದ್ರಾಡಳಿತ ಪ್ರದೇಶಗಳು ಹಾಗೂ ರಾಜ್ಯಗಳಿಗೆ ಭಾನುವಾರ ಪತ್ರ ಬರೆದಿದ್ದು, ಸೋಂಕು ಹರಡುವಿಕೆ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸುವಂತೆ ಸೂಚಿಸಿದ್ದಾರೆ. ಸೋಂಕು ಹರಡುವಿಕೆ ಕುರಿತು ಸೂಕ್ಷ್ಮ ನಿಗಾ ವಹಿಸುವಂತೆ ಹಾಗೂ ಲಸಿಕೆ ನೀಡಿಕೆ ಪ್ರಕ್ರಿಯೆಯ ವೇಗ ಹೆಚ್ಚಿಸುವಂತೆ ನಿರ್ದೇಶನ ನೀಡಿದ್ದಾರೆ.

ಓದಿ: 

ಶನಿವಾರ ಅಧಿಕಾರಿಗಳ ಜತೆ ಸಭೆ ನಡೆಸಿದ್ದ ಪ್ರಧಾನಿ ಮೋದಿ, ಸೋಂಕು ಪ್ರಸರಣ ತಡೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅಲ್ಲದೆ, ಅಂತರರಾಷ್ಟ್ರೀಯ ಸಂಚಾರ ನಿರ್ಬಂಧ ಸಡಿಲಿಸುವ ಬಗ್ಗೆ ಮರುಪರಿಶೀಲನೆ ನಡೆಸುವಂತೆ ತಿಳಿಸಿದ್ದರು.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು