ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್ ಭೀತಿ: ದೆಹಲಿಯಲ್ಲಿ 30,000 ಹಾಸಿಗೆ ಸಜ್ಜು

Last Updated 30 ನವೆಂಬರ್ 2021, 17:10 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ನ ಓಮೈಕ್ರಾನ್ ತಳಿ ಹರಡುವ ಭೀತಿಯಿದ್ದು, ಅದನ್ನು ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ. ಆಮ್ಲಜನಕ ಸೌಲಭ್ಯವಿರುವ 30,000 ಹಾಸಿಗೆಗಳು ಹಾಗೂ ಆಮ್ಲಜನಕ ಪೂರೈಕೆ ಹಾಗೂ ಸಂಗ್ರಹ ವ್ಯವಸ್ಥೆಯನ್ನು ಒಂದೆರಡು ವಾರಗಳಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗುವುದು ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಅವರು ಸರ್ಕಾರದ ವಿವಿಧ ಇಲಾಖೆಗಳ ಜೊತೆ ಸಿದ್ಧತೆ ಪರಿಶೀಲನಾ ಸಭೆ ನಡೆಸಿದರು. 30 ಸಾವಿರ ಹಾಸಿಗೆಗಳಲ್ಲಿ 10,000 ಐಸಿಯು ಹಾಸಿಗೆಗಳು ಸೇರಿವೆ. ಇನ್ನೂ 6,800 ಹಾಸಿಗೆಗಳು ಫೆಬ್ರುವರಿ ಹೊತ್ತಿಗೆ ಸಿದ್ಧವಾಗಲಿವೆ ಎಂದು ಅವರು ಹೇಳಿದರು.

‘ಪ್ರತೀ ವಾರ್ಡ್‌ನಲ್ಲಿ 100 ಆಮ್ಲಜನಕ ಸೌಲಭ್ಯವಿರುವ ಹಾಸಿಗೆಗಳನ್ನು ಎರಡು ವಾರದಲ್ಲಿ ಸಿದ್ಧಪಡಿಸಲು ಸಾಧ್ಯವಿದೆ. ಒಟ್ಟು 270 ವಾರ್ಡ್‌ಗಳಿಂದ 27,000 ಹಾಸಿಗೆಗಳು ಸಿದ್ಧವಾಗಲಿವೆ’ ಎಂದು ಅವರು ತಿಳಿಸಿದರು. ಸಿಬ್ಬಂದಿಯನ್ನು ತರಬೇತುಗೊಳಿಸುತ್ತಿದ್ದು, 32 ರೀತಿಯ ಔಷಧಗಳ ಖರೀದಿ ಮಾಡಲಾಗುತ್ತಿದೆ ಎಂದಿದ್ದಾರೆ. ಹೋಮ್ ಐಸೊಲೇಷನ್‌ಗೆ ಸಿದ್ಧತೆ ನಡೆಯುತ್ತಿದ್ದು, 121 ಟನ್ ಆಮ್ಲಜನಕ ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT