ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್: ಪ್ರಧಾನಿ ನರೇಂದ್ರ ಮೋದಿ ಯುಎಇ ಪ್ರವಾಸ ಮುಂದೂಡಿಕೆ

Last Updated 29 ಡಿಸೆಂಬರ್ 2021, 10:46 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಯುಎಇ ಪ್ರವಾಸ ಮುಂದೂಡಿಕೆಯಾಗಿದೆ.ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಪ್ರವಾಸ ಮುಂದೂಡಿಕೆಯಾಗಿದೆ ಎಂದು ಮೂಲಗಳು ಹೇಳಿವೆ.

ಪೂರ್ವನಿಗದಿಯಂತೆ ಮೋದಿ ಅವರು ಜನವರಿ 6ರಂದು ಯುಎಇಗೆ ತೆರಳಬೇಕಿತ್ತು. ಪ್ರವಾಸ ಮುಂದೂಡಿಕೆಯಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಮೋದಿ ಅವರ ಯುಎಇ ಹಾಗೂ ಕುವೈತ್ ಪ್ರವಾಸ ಮುಂದೂಡಿಕೆಯಾಗಿದೆ. ಪ್ರವಾಸದ ದಿನಾಂಕ ಫೆಬ್ರುವರಿಗೆ ಮರುನಿಗದಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳನ್ನು ಉಲ್ಲೇಖಿಸಿ ಹಲವು ಮಾಧ್ಯಮಗಳು ವರದಿ ಮಾಡಿವೆ.

ಅಮೆರಿಕ, ಯುರೋಪ್ ದೇಶಗಳು, ದಕ್ಷಿಣ ಆಫ್ರಿಕಾಗಳಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತದಲ್ಲಿ ಪರಿಸ್ಥಿತಿ ಸದ್ಯ ನಿಯಂತ್ರಣದಲ್ಲಿದ್ದರೂ ಈವರೆಗೆ 781 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ.

ಯುಎಇಯಲ್ಲಿ ಸೋಮವಾರ 1,732 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT