ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಓಮೈಕ್ರಾನ್‌ ಸೋಂಕು ಶ್ವಾಸಕೋಶಕ್ಕೆ ಹೆಚ್ಚು ಹಾನಿ ಮಾಡುವುದಿಲ್ಲ: ಅಧ್ಯಯನ

Last Updated 2 ಜನವರಿ 2022, 11:06 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ ರೂಪಾಂತರ ತಳಿ ‘ಓಮೈಕ್ರಾನ್‌’ ಸೋಂಕು ಮನುಷ್ಯನ ಶ್ವಾಸಕೋಶಕ್ಕೆ ಹೆಚ್ಚು ಹಾನಿಯುಂಟಾಗುವ ಸಾಧ್ಯತೆ ಕಡಿಮೆ ಎಂದು ಅಧ್ಯಯನ ತಿಳಿಸಿದೆ.

ಹಿಂದಿನ ಕೊರೊನಾ ರೂಪಾಂತರಗಳಿಗಿಂತ ಓಮೈಕ್ರಾನ್ ತೀವ್ರತೆ ಕಡಿಮೆ ಇದೆ. ಇದರಿಂದಾಗಿ ಶ್ವಾಸಕೋಶಕ್ಕೆ ಹೆಚ್ಚು ಹಾನಿಯನ್ನುಂಟು ಮಾಡುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

ಅಮೆರಿಕ ಮತ್ತು ಜಪಾನ್‌ ವಿಜ್ಞಾನಿಗಳ ಒಕ್ಕೂಟದಿಂದ ಇತ್ತೀಚೆಗೆ ಇಲಿಗಳ ಮೇಲೆ ಹೊಸ ಅಧ್ಯಯನ ನಡೆಸಲಾಗಿದ್ದು, ಓಮೈಕ್ರಾನ್ ಸೋಂಕಿನಿಂದ ಶ್ವಾಸಕೋಶಕ್ಕೆ ಹಾನಿಯಾಗುವ ಸಾಧ್ಯತೆ ಕಡಿಮೆ. ಜತೆಗೆ ಮರಣ ಪ್ರಮಾಣ ಕಡಿಮೆ ಇರುತ್ತದೆ ಎಂದು ಹೇಳಲಾಗಿದೆ.

ಮನುಷ್ಯನ ಅಂಗಾಂಗಗಳ ಮೇಲೆ ಓಮೈಕ್ರಾನ್‌ ಸೋಂಕಿನಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಹಾಂಗ್‌ಕಾಂಗ್‌ ವಿಶ್ವವಿದ್ಯಾಲಯದ ತಜ್ಞರು ಅಧ್ಯಯನ ಮಾಡಿದ್ದರು.

ದಕ್ಷಿಣ ಆಫ್ರಿಕಾದಲ್ಲಿ ಡೆಲ್ಟಾ ಸೋಂಕಿತರಿಗೆ ಹೋಲಿಸಿದರೆ ಶೇ 80ರಷ್ಟು ಓಮೈಕ್ರಾನ್ ಪೀಡಿತರು ಬೇಗ ಚೇತರಿಸಿಕೊಂಡಿದ್ದಾರೆ. ಅದೇ ರೀತಿ ಇಂಗ್ಲೆಂಡ್‌ನಲ್ಲಿಯೂ ಕೂಡ ಸೋಂಕಿನ ತೀವ್ರತೆ ಶೇ 70ರಷ್ಟು ಕಡಿಮೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT