ಭಾನುವಾರ, ಜುಲೈ 3, 2022
27 °C

ದೆಹಲಿ: ಹೆಚ್ಚಿನ ಮಾದರಿಗಳಲ್ಲಿ ಬಿಎ.2.12 ತಳಿ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಏಪ್ರಿಲ್‌ ತಿಂಗಳ ಮೊದಲ ಹದಿನೈದು ದಿನಗಳಲ್ಲಿ ದೆಹಲಿಯಲ್ಲಿ ಪರೀಕ್ಷೆಗೆ ಒಳಪಡಿಸಿರುವ ಮಾದರಿಗಳಲ್ಲಿ ಓಮೈಕ್ರಾನ್‌ನ ಬಿಎ.2.12 ತಳಿ ಹೆಚ್ಚಿನ ಪ್ರಮಾಣದಲ್ಲಿ ಪತ್ತೆಯಾಗಿದೆ. ಇದು ನಗರದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗಲು ಕಾರಣ ಎಂದು ಮೂಲಗಳು ಗುರುವಾರ ತಿಳಿಸಿವೆ.

ಅಮೆರಿಕದಲ್ಲಿ ಈಚೆಗೆ ಕೋವಿಡ್‌ ಪ್ರಕರಣಗಳು ಏರಿಕೆಯಾಗಲು ಕಾರಣವಾಗಿದ್ದ ಬಿಎ.2.12.1 ತಳಿ ಕೂಡ ಕೆಲವು ಮಾದರಿಗಳಲ್ಲಿ ಪತ್ತೆಯಾಗಿದೆ ಎಂದು ವೈರಾಣು ಸಂರಚನೆ ವಿಶ್ಲೇಷಣೆ ಸಂಸ್ಥೆ ಐಎನ್‌ಎಸ್‌ಎಸಿಒಜಿ ತಿಳಿಸಿದೆ. ಆದರೆ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ.

‘ಹೊಸ ಉಪತಳಿ ಬಿಎ.2.12 ಶೇ 52 ರಷ್ಟು ಮಾದರಿಗಳಲ್ಲಿ ಹಾಗೂ ಬಿಎ.2.10 ಶೇ11ರಷ್ಟು ಮಾದರಿಗಳಲ್ಲಿ ಪತ್ತೆಯಾಗಿದೆ’ ಎಂದೂ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಏಪ್ರಿಲ್‌ ತಿಂಗಳ ಮೊದಲ ಹದಿನೈದು ದಿನಗಳಲ್ಲಿ 300 ಮಾದರಿಗಳನ್ನು ‘ಜೆನೋಮ್ ಸಿಕ್ವೆನ್ಸಿಂಗ್‌’ ಪರೀಕ್ಷೆಗೆ ಒಳಪಡಿಸಲಾಗಿತ್ತು. ದೆಹಲಿಯಲ್ಲಿ ಬುಧವಾರ 1,009 ಹೊಸ ಪ್ರಕರಣಗಳು ದೃಢಪಟ್ಟಿದ್ದವು.

ಲಸಿಕೆ ಹಾಕಿಸಿಕೊಳ್ಳುವವರೆಗೆ ಯಾರೂ ಸುರಕ್ಷಿತರಲ್ಲ: ಭಾರತದಲ್ಲಿ ಲಸಿಕೆ ಹಾಕಿಸಿಕೊಳ್ಳುವಲ್ಲಿ ಅಸಮಾನತೆ ಸಮಸ್ಯೆಯಾಗಿಯೇ ಉಳಿದುಕೊಂಡಿದೆ. ಒಟ್ಟು ಜನಸಂಖ್ಯೆಯ ಶೇ2 ಕ್ಕಿಂತ ಕಡಿಮೆ ಜನರು ಬೂಸ್ಟರ್‌ ಡೋಸ್‌ ಪಡೆದುಕೊಂಡಿದ್ದಾರೆ. ವಿಶ್ವದ 56 ದೇಶಗಳಲ್ಲಿ ಶೇ 10ರಷ್ಟು ಜನರಿಗೆ ಬೂಸ್ಟರ್‌ ಡೋಸ್‌ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವಿಜ್ಞಾನಿ ಅಮಿತಾ ಗುಪ್ತಾ ಹೇಳಿದ್ದಾರೆ.

ಲಸಿಕೆ ಹಾಕಿಸಿಕೊಳ್ಳುವವರೆಗೆ ಯಾರೂ ಸುರಕ್ಷಿತರಲ್ಲ ಎಂದೂ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು