ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಮತ್ತಿಬ್ಬರಿಗೆ ಓಮೈಕ್ರಾನ್; ದೇಶದಲ್ಲಿ ಸೋಂಕಿತರ ಸಂಖ್ಯೆ 40ಕ್ಕೆ

Last Updated 14 ಡಿಸೆಂಬರ್ 2021, 2:32 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಾಣುವಿನ ಹೊಸ ರೂಪಾಂತರ ತಳಿ ‘ಓಮೈಕ್ರಾನ್‌’ನ ಎರಡು ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಇಬ್ಬರೂ ದುಬೈ ಪ್ರಯಾಣದ ಇತಿಹಾಸವನ್ನು ಹೊಂದಿದ್ದರು ಎನ್ನಲಾಗಿದೆ.

ಮಹಾರಾಷ್ಟ್ರದಲ್ಲಿ 20, ರಾಜಸ್ಥಾನದಲ್ಲಿ 9, ಕರ್ನಾಟಕದಲ್ಲಿ 3, ಗುಜರಾತ್‌ನಲ್ಲಿ 3, ಕೇರಳ, ಆಂಧ್ರ ಪ್ರದೇಶ, ದೆಹಲಿ ಮತ್ತು ಚಂಡೀಗಡಲ್ಲಿ ತಲಾ ಒಂದು ಓಮೈಕ್ರಾನ್ ಪ್ರಕರಣಗಳು ಈವರೆಗೆ ವರದಿಯಾಗಿವೆ.

ಮಹಾರಾಷ್ಟ್ರದಲ್ಲಿ ಸೋಂಕು ಪತ್ತೆಯಾಗಿರುವ ಮಹಿಳೆ ಸೇರಿದಂತೆ ಇಬ್ಬರಿಗೂ ಯಾವುದೇ ಲಕ್ಷಣಗಳಿರಲಿಲ್ಲ ಮತ್ತು ಇಬ್ಬರೂ ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿದ್ದರು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಸೋಮವಾರ ಬಿಡುಗಡೆ ಮಾಡಿರುವ ವರದಿ ಪ್ರಕಾರ ಎರಡು ಹೊಸ ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಎರಡೂ ಪ್ರಕರಣಗಳು ಲಾತೂರ್‌ ಮತ್ತು ಪುಣೆಯಲ್ಲಿ ವರದಿಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

'ಪುಣೆಯ 39 ವರ್ಷದ ಮಹಿಳೆ ಮತ್ತು ಲಾತೂರ್‌ನ 33 ವರ್ಷದ ಪುರಷ ದುಬೈನಿಂದ ಹಿಂದಿರುಗಿದ್ದರು. ಇಬ್ಬರ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪರೀಕ್ಷೆಗೊಳಪಡಿಸಿದ್ದು, ವರದಿ ನೆಗೆಟಿವ್ ಬಂದಿದೆ' ಎಂದು ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡಿ.2ರಂದು ಎರಡು ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದವು. ದಕ್ಷಿಣ ಆಫ್ರಿಕಾದ ಪ್ರಜೆ ಮತ್ತು ನಗರದ ವೈದ್ಯರೊಬ್ಬರಲ್ಲಿ ಸೋಂಕು ದೃಢಪಟ್ಟಿತ್ತು. ಅವರಿಬ್ಬರ ಸಂಪರ್ಕಕ್ಕೆ ಬಂದಿದ್ದ ಯಾರಲ್ಲೂ ಓಮೈಕ್ರಾನ್‌ ಸೋಂಕು ಕಂಡು ಬಂದಿರಲಿಲ್ಲ. ಶನಿವಾರವಷ್ಟೇ ದೆಹಲಿಯಲ್ಲಿ ಎರಡನೇ ಓಮೈಕ್ರಾನ್‌ ಪ್ರಕರಣ ಪತ್ತೆಯಾಗಿತ್ತು. 35 ವರ್ಷ ವಯಸ್ಸಿನ ಸೋಂಕಿತ ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT