ಶುಕ್ರವಾರ, ಜನವರಿ 21, 2022
30 °C

ಮಹಾರಾಷ್ಟ್ರದಲ್ಲಿ ಮತ್ತೆ 7 ಜನರಿಗೆ ಓಮೈಕ್ರಾನ್: ದೇಶದಲ್ಲಿ ಒಟ್ಟು 12 ಪ್ರಕರಣ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದಲ್ಲಿ ಭಾನುವಾರ ಕೊರೊನಾ ವೈರಸ್‌ನ ರೂಪಾಂತರ ತಳಿ ‘ಓಮೈಕ್ರಾನ್’ 7 ಹೊಸ ಪ್ರಕರಣಗಳು ದೃಢಪಟ್ಟವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇದರೊಂದಿಗೆ ಮಹಾರಾಷ್ಟ್ರದಲ್ಲಿ ಓಮೈಕ್ರಾನ್‌ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇದುವರೆಗೆ 12 ಪ್ರಕರಣಗಳು ದಾಖಲಾಗಿವೆ. ರಾಜಧಾನಿ ದೆಹಲಿಯಲ್ಲಿ ಇಂದು ಮೊದಲ ಪ್ರಕರಣ ದೃಢಪಟ್ಟಿದೆ. ತಾಂಜಾನಿಯಾದಿಂದ ದೆಹಲಿಗೆ ಬಂದಿದ್ದ 37 ವರ್ಷ ವ್ಯಕ್ತಿಗೆ ಸೋಂಕು ತಗುಲಿರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಇದಕ್ಕೂ ಮುನ್ನ ಕರ್ನಾಟಕದಲ್ಲಿ 2, ಗುಜರಾತಿನಲ್ಲಿ 1 ಪ್ರಕರಣ ದಾಖಲಾಗಿತ್ತು.

ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿರುವ ಬ್ರಿಟನ್, ದಕ್ಷಿಣ ಆಫ್ರಿಕಾ, ಬ್ರೆಜಿಲ್, ಬೋಟ್ಸ್‌ವಾನ, ಚೀನಾ, ಮಾರಿಷಸ್, ನ್ಯೂಜಿಲೆಂಡ್, ಜಿಂಬಾಬ್ವೆ, ಸಿಂಗಪುರ, ಹಾಂಗ್‌ಕಾಂಗ್ ಹಾಗೂ ಇಸ್ರೇಲ್ ಅನ್ನು ‘ಅಪಾಯದಲ್ಲಿರುವ’ ದೇಶಗಳು ಎಂದು ಪರಿಗಣಿಸಲಾಗಿದೆ.

ಈ ದೇಶಗಳಿಂದ ಬಂದವರು ಭಾರತಕ್ಕೆ ಬಂದ ಕೂಡಲೇ ಹೆಚ್ಚುವರಿ ತಪಾಸಣೆ, ಕ್ವಾರಂಟೈನ್ ನಿಯಮಗಳನ್ನು ಪಾಲಿಸಬೇಕಿದೆ. ಓಮೈಕ್ರಾನ್‌ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರಿಗಾಗಿ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಪ್ರಕಟಿಸಿತ್ತು.

ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್‌ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮೈಕ್ರಾನ್‌’ ಎಂದು ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದೆ.

ಇದನ್ನೂ ಓದಿ... 15 ಮಂದಿ ಶಂಕಿತ ಓಮೈಕ್ರಾನ್ ಸೋಂಕಿತರು ದೆಹಲಿ ಆಸ್ಪತ್ರೆಗೆ ದಾಖಲು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು