ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶದಲ್ಲಿ ಅವಘಡ: ಉರುಳಿದ ಬಂಡೆ; 9 ಪ್ರವಾಸಿಗರ ಸಾವು

₹2 ಲಕ್ಷ ಪರಿಹಾರ ಘೋಷಣೆ
Last Updated 25 ಜುಲೈ 2021, 19:30 IST
ಅಕ್ಷರ ಗಾತ್ರ

ಶಿಮ್ಲಾ:ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಬಸ್ತೇರಿ ಬಳಿ ಭಾನುವಾರ ಸಂಭವಿಸಿದ ಭೂಕುಸಿತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಪ್ರವಾಸಿಗರು ತೆರಳುತ್ತಿದ್ದ ಟೆಂಪೊ ಟ್ರಾವಲರ್ ಮೇಲೆ ಭಾರಿ ಬಂಡೆಗಳು ಬಿದ್ದು ಈ ಅನಾಹುತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಸುರಿದ ಮಳೆಯಿಂದಾಗಿ ಸಾಂಗ್ಲಾ- ಚಿಟ್ಕುಲ್ ರಸ್ತೆಯ ಬಸ್ತೇರಿ ಬಳಿ ಮಧ್ಯಾಹ್ನ 1.25ಕ್ಕೆಭೂಕುಸಿತ ಸಂಭವಿ
ಸಿದೆ. ಬಂಡೆಗಳು ಬಿದ್ದಿದ್ದರಿಂದ ಸೇತುವೆ ಕುಸಿದುಬಿದ್ದಿದ್ದು, ಪ್ರಯಾಣಿಕರು ಚಿಟ್‌ಕುಲ್‌ನಿಂದ ಸಾಂಗ್ಲಾಕ್ಕೆ ಹೋಗುತ್ತಿದ್ದರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಬಸ್ತೇರಿಯಲ್ಲಿ ಸೇತುವೆ ಕುಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಬಂಡೆಗಳು ಉರುಳಿ ಬೀಳುತ್ತಿರುವ ದೃಶ್ಯಗಳಿವೆ.

ಕಿನ್ನೌರ್ ಜಿಲ್ಲೆಯಲ್ಲಿ ಇದೇ ರೀತಿಯ ಮತ್ತೊಂದು ಘಟನೆ ನಡೆದಿದ್ದು, ಭೂಕುಸಿತದಲ್ಲಿ ಪಾದಚಾರಿ ಗಾಯಗೊಂಡಿದ್ದಾರೆ.

ಕಿನ್ನೌರ್‌ನಲ್ಲಿ ಭೂಕುಸಿತದಿಂದ ಜನರು ಸಾವನ್ನಪ್ಪಿರುವುದಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ‘ಘಟನೆಯಿಂದ ತೀವ್ರ ಬೇಸರವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ’ ಎಂದು ರಾಷ್ಟ್ರಪತಿ ಟ್ವೀಟ್ ಮಾಡಿದ್ದಾರೆ.

‘ಗಾಯಾಳುಗಳ ಚಿಕಿತ್ಸೆಗೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಮೃತರ ರಕ್ತಸಂಬಂಧಿಗಳಿಗೆ ತಲಾ ₹2 ಲಕ್ಷ, ಗಾಯಗೊಂಡವರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ₹50 ಸಾವಿರ ಪರಿಹಾರ ನೀಡಲಾಗುತ್ತಿದೆ’ ಎಂದು ಪ್ರಧಾನಿ ತಿಳಿಸಿದ್ದಾರೆ.

ಕೇರಳದಲ್ಲಿ ಭಾರಿ ಮಳೆ

ತಿರುವನಂತಪುರ: ಕೇರಳದ ಹಲವಾರು ಭಾಗಗಳಲ್ಲಿ ಭಾನುವಾರ ಬೆಳಿಗ್ಗೆ ಭಾರಿ ಮಳೆಯಾಗಿದೆ. ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಲಾಖೆಯ ಮುನ್ಸೂಚನೆ ಪ್ರಕಾರ, ತಿರುವನಂತಪುರ, ಕೊಲ್ಲಂ, ಪ‍ತ್ತನಂತಿಟ್ಟ, ಇಡುಕ್ಕಿ, ಕೊಟ್ಟಾಯಂ, ಆಲಪ್ಪುಳ, ಎರ್ನಾಕುಲಂ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮಧ್ಯಮದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಈ ಎಲ್ಲ ಜಿಲ್ಲೆಗಳಿಗೆ ಭಾನುವಾರ ಯೆಲ್ಲೋ ಅಲರ್ಟ್ ನೀಡಲಾಗಿತ್ತು.

ಕಾಣೆಯಾದವರಿಗಾಗಿ ಹುಡುಕಾಟ

ಮುಂಬೈ: ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ, ಅದರಿಂದ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ಈವರೆಗೆ ಸುಮಾರು 100 ಜನರು ನಾಪತ್ತೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಅವಘಡಗಳಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾತಾರಾ ಜಿಲ್ಲೆಯಲ್ಲಿ ಭಾನುವಾರ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಭೂಕುಸಿತದ ನಂತರ ಕಾಣೆಯಾದವರಿಗಾಗಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT