ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸಕ್ಕೆ ಸೇರಲು ಬಯಸಿದ ಸೊಸೆ ಮೇಲೆ ಇಟ್ಟಿಗೆಯಿಂದ ಮನಸೋಇಚ್ಛೆ ಹಲ್ಲೆ ನಡೆಸಿದ ಮಾವ!

Last Updated 16 ಮಾರ್ಚ್ 2023, 6:05 IST
ಅಕ್ಷರ ಗಾತ್ರ

ನವದೆಹಲಿ: ಕೆಲಸಕ್ಕೆ ಸೇರಲು ಬಯಸಿದ ಸೊಸೆಯ ಮೇಲೆ ಆಕೆಯ ಮಾವ ಇಟ್ಟಿಗೆಯಿಂದ ಮನಸೋಇಚ್ಛೆ ಹಲ್ಲೆ ನಡೆಸಿರುವ ಅಮಾನುಷ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

26 ವರ್ಷದ ಕಾಜಲ್‌ ಕೆಲಸಕ್ಕೆ ಸೇರಲು ಬಯಸಿದ್ದರು. ಆಕೆಯ ನಿರ್ಧಾರವನ್ನು ಗಂಡನ ಮನೆಯವರು ಒಪ್ಪಿಕೊಂಡಿರಲಿಲ್ಲ. ಇದೇ ಕಾರಣಕ್ಕಾಗಿ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕಾಜಲ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಲ್ಲೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಕಾಜಲ್‌ ಕೆಲಸಕ್ಕೆ ಸೇರಿ ಗಂಡ ಪ್ರವೀಣ್‌ ಕುಮಾರ್‌ಗೆ ಸಹಾಯ ಮಾಡಲು ಬಯಸಿದ್ದರು. ಆ ನಿಟ್ಟಿನಲ್ಲಿ ಆಕೆ ಮಂಗಳವಾರ ಕೆಲಸಕ್ಕಾಗಿ ಸಂದರ್ಶನಕ್ಕೆ ತೆರಳುತ್ತಿದ್ದರು. ಈ ವಿಷಯ ತಿಳಿದ ಆಕೆಯ ಮಾವ ನಡು ರಸ್ತೆಯಲ್ಲೇ ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದಾರೆ.

ಕಾಜಲ್‌ ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಇದರಿಂದ ಆಕೆಯ ತಲೆಗೆ ಗಂಭೀರ ಗಾಯವಾಗಿದೆ. ಘಟನೆಯ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಕಾಜಲ್‌ ಪೋಷಕರು ನೀಡಿದ ದೂರಿನನ್ವಯ ಆರೋಪಿ ಮಾವನ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT