ನವದೆಹಲಿ: ಮುಂಬೈ ಮೂಲದ ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಫ್ತಾಬ್ ಅಮೀನ್ ಪೂನಾವಾಲಾ ವಿಚಾರಣೆಯನ್ನು ದೆಹಲಿ ಪೊಲೀಸರು ತೀವ್ರಗೊಳಿಸಿದ್ದಾರೆ.
ಅಫ್ತಾಬ್ ಕಳೆದ ತಿಂಗಳು ಮುಂಜಾನೆ ತನ್ನ ಮನೆಯ ಹೊರಗೆ ಬ್ಯಾಗ್ ಹಿಡಿದುಕೊಂಡು ಹೋಗುತ್ತಿದ್ದ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಈ ಹಿನ್ನೆಲೆಯಲ್ಲಿ ಅಫ್ತಾಬ್, ಶ್ರದ್ಧಾಳ ಮೃತದೇಹದ ಭಾಗಗಳನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಹೋಗುತ್ತಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಅಫ್ತಾಬ್‌ನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಸುದ್ದಿಸಂಸ್ಥೆ ‘ಎನ್‌ಡಿಟಿವಿ’ ವರದಿ ಮಾಡಿದೆ.
ಇಂದು ಬೆಳಿಗ್ಗೆ ಅಫ್ತಾಬ್ ಅಪಾರ್ಟ್‌ಮೆಂಟ್‌ನಲ್ಲಿ ಚೂಪಾದ ಕತ್ತರಿಸುವ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳನ್ನು ಶ್ರದ್ಧಾಳ ಮೃತದೇಹವನ್ನು ಕತ್ತರಿಸಲು ಬಳಸಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಫ್ತಾಬ್, ತೀವ್ರ ವಿಚಾರಣೆ ಬಳಿಕ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.