ಕೊಹ್ಲಿ ಪುತ್ರಿಗೆ ಬೆದರಿಕೆ: ಮಹಿಳಾ ಆಯೋಗದಿಂದ ಸ್ವಯಂ ಪ್ರೇರಿತ ಪ್ರಕರಣ
ದೆಹಲಿ: ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಸತತ ಸೋಲು ಕಂಡ ಹಿನ್ನೆಲೆಯಲ್ಲಿ ಕೆಲ ಮಂದಿ ವಿರಾಟ್ ಕೊಹ್ಲಿ ಅವರ 9 ತಿಂಗಳ ಮಗುವಿಗೆ ಆನ್‌ಲೈನ್‌ನಲ್ಲಿ ಅತ್ಯಾಚಾರ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದ್ದು, ಇದನ್ನು ದೆಹಲಿ ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.
DCW takes suo-motu cognisance on reports of online rape threats to Virat Kohli's 9-month-old daughter following INDvsPAK match. DCW asks Dy Commissioner of Police to provide them with a copy of FIR, details of accused identified & arrested, detailed action taken report by Nov 8. pic.twitter.com/InKIhgldBj
— ANI (@ANI) November 2, 2021
ವಿಶ್ವಕಪ್ ಸರಣಿಯಲ್ಲಿ ಭಾರತವು ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಕೆಲ ಮಂದಿ ವಿರಾಟ್ ಕೊಹ್ಲಿ ಅವರ 9 ತಿಂಗಳ ಮಗುವಿಗೆ ಅತ್ಯಾಚಾರ ಬೆದರಿಕೆ ಹಾಕುತ್ತಿದ್ದಾರೆ ಎಂದು ಸೋಮವಾರ ವರದಿಯಾಗಿತ್ತು.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿಯ ಮಹಿಳಾ ಆಯೋಗ, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದಾಖಲಿಸಿರುವ ಎಫ್‌ಐಆರ್, ಕೈಗೊಂಡ ಕ್ರಮ, ಆರೋಪಿಗಳ ವಿವರವನ್ನು ನ.8ರ ಒಳಗೆ ನೀಡುವಂತೆ ಮಹಿಳಾ ಆಯೋಗವು ದೆಹಲಿಯ ಸಹಾಯಕ ಕಮಿಷನರ್ ಅವರಿಗೆ ಸೂಚಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.