ಶುಕ್ರವಾರ, ಸೆಪ್ಟೆಂಬರ್ 25, 2020
29 °C
‘ಕ್ವಿಟ್‌ ಇಂಡಿಯಾ’ ಚಳವಳಿಯ 78ನೇ ವರ್ಷಾಚರಣೆ

ಭಾವನಾತ್ಮಕವಾಗಿ ದೇಶ ಒಂದಾಗಬೇಕು: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಪಿಟಿಐ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಸದೃಢವಾದ ಹಾಗೂ ಭಾವನಾತ್ಮಕವಾಗಿ ಒಂದಾದ ಭಾರತವನ್ನು ನಿರ್ಮಿಸುವ ಕಾರ್ಯಕ್ಕೆ ಒತ್ತು ನೀಡಬೇಕು. ಈ ಕಾರ್ಯ ಆಂದೋಲನ ರೀತಿಯಲ್ಲಿ ನಡೆಯಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು  ಪ್ರತಿಪಾದಿಸಿದ್ದಾರೆ.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಮುಖ ಪಾತ್ರವಹಿಸಿದ್ದ ‘ಕ್ವಿಟ್‌ ಇಂಡಿಯಾ’ ಚಳವಳಿಯ 78ನೇ ವಾರ್ಷಿಕೋತ್ಸವದ ಅಂಗವಾಗಿ ಅವರು ಫೇಸ್‌ಬುಕ್‌ನಲ್ಲಿ ಭಾನುವಾರ ಲೇಖನವೊಂದನ್ನು ಪ್ರಕಟಿಸಿದ್ದಾರೆ.

1000 ಇಸವಿಯಿಂದ 1947ರ ವರೆಗಿನ ಇತಿಹಾಸದ ಘಟನೆಗಳನ್ನು ಮೆಲುಕು ಹಾಕಿರುವ ಅವರು, ವಿದೇಶಿಯರ ಆಕ್ರಮಣ, ವಸಾಹತುಶಾಹಿ ಕಾಲಘಟ್ಟದ ಘಟನೆಗಳ ವಿವರಗಳನ್ನೂ ಹಂಚಿಕೊಂಡಿದ್ದಾರೆ.

ಕಳೆದ ಎರಡು ಶತಮಾನಗಳ ಅವಧಿಯಲ್ಲಿ ಸಾಂಸ್ಕೃತಿಕವಾಗಿ ದೇಶವು ಭಾರಿ ಬೆಲೆ ತೆರಬೇಕಾಯಿತು. ದೇಶ ಆರ್ಥಿಕವಾಗಿಯೂ ಶೋಷಣೆಗೆ ಒಳಗಾಯಿತು ಎಂದು ವಿವರಿಸಿದ್ದಾರೆ.

‘ದೇಶವಾಸಿಗಳಲ್ಲಿ ಒಗ್ಗಟ್ಟಿನ ಕೊರತೆಯಿಂದಾಗಿ ದೇಶವು ಸತತವಾಗಿ ಶೋಷಣೆಗೆ ಒಳಗಾಗಬೇಕಾಯಿತು. ಇತಿಹಾಸದ ಈ ಘಟನೆಗಳಿಂದ ಭಾರತೀಯರು ಪಾಠ ಕಲಿಯವುದು ಅವಶ್ಯ. ನಮ್ಮ ಸಾಂಸ್ಕೃತಿಕ ಮೌಲ್ಯಗಳು ಹಾಗೂ ಪರಂಪರೆಯನ್ನು ಉಳಿಸಿಕೊಳ್ಳುವ ಜೊತೆಜೊತೆಗೆ ನಾವೆಲ್ಲಾ ಭಾರತೀಯರು ಎಂಬ ಅರಿವನ್ನು ಬೆಳೆಸಿಕೊಳ್ಳಬೇಕು’ ಎಂದೂ ಅವರು ಲೇಖನದಲ್ಲಿ ಹೇಳಿದ್ದಾರೆ. 

‘2022ರಲ್ಲಿ ದೇಶವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತದೆ. ಅಷ್ಟರೊಳಗೆ ದೇಶದಲ್ಲಿನ ಭ್ರಷ್ಟಾಚಾರ, ಬಡತನ, ಅನಕ್ಷರತೆ, ಅಸಮಾನತೆ ಹಾಗೂ ಎಲ್ಲ ಬಗೆಯ ಸಾಮಾಜಿಕ ಅನಿಷ್ಟಗಳನ್ನು ನಿರ್ಮೂಲನೆ ಮಾಡುವುದಾಗಿ ಪ್ರತಿಯೊಬ್ಬ ಭಾರತೀಯರು ಪ್ರತಿಜ್ಞೆ ಮಾಡಬೇಕು’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು