ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಅನರ್ಹ | ಭಾರತದ ಪ್ರಜಾಪ್ರಭುತ್ವಕ್ಕೆ 'ಓಂ ಶಾಂತಿ' ಎಂದ ಜೈರಾಮ್ ರಮೇಶ್

Last Updated 24 ಮಾರ್ಚ್ 2023, 10:07 IST
ಅಕ್ಷರ ಗಾತ್ರ

ನವದೆಹಲಿ: ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಬಲವಾಗಿ ಖಂಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ ಉಸ್ತುವಾರಿ) ಜೈರಾಮ್ ರಮೇಶ್, ಭಾರತದ ಪ್ರಜಾಪ್ರಭುತ್ವಕ್ಕೆ 'ಓಂ ಶಾಂತಿ' ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಜೈರಾಮ್ ರಮೇಶ್, ಈ ಹೋರಾಟವನ್ನು ಕಾನೂನಾತ್ಮಕವಾಗಿ ಮತ್ತು ರಾಜಕೀಯವಾಗಿ ಎದುರಿಸುತ್ತೇವೆ. ನಾವು ಭಯಪಡುವುದಿಲ್ಲ, ಮೌನವಾಗಿರುವುದಿಲ್ಲ ಎಂದು ಹೇಳಿದ್ದಾರೆ.

ಷೇರು ಅಕ್ರಮದಲ್ಲಿ ಸಿಲುಕಿರುವ ಉದ್ಯಮಿ ಗೌತಮ್ ಅದಾನಿ ಮತ್ತು ಪ್ರಧಾನಿ ಮೋದಿ ನಂಟಿನ ಮಹಾ ಮೆಗಾ ಹಗರಣದಲ್ಲಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯ ಬದಲಿಗೆ ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವವನ್ನು ಅನರ್ಹಗೊಳಿಸಲಾಗಿದೆ. ಭಾರತದ ಪ್ರಜಾಪ್ರಭುತ್ವಕ್ಕೆ ಓಂ ಶಾಂತಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ. ಇದರ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT