ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಘು ಗಡಿಯ ಬಳಿ ಎಸ್‌ಎಚ್‌ಒ ಮೇಲೆ ಹಲ್ಲೆ: ವ್ಯಕ್ತಿ ಬಂಧನ

Last Updated 17 ಫೆಬ್ರುವರಿ 2021, 9:23 IST
ಅಕ್ಷರ ಗಾತ್ರ

ನವದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿರುವ ಸಿಂಗು ಗಡಿಯಲ್ಲಿ ದೆಹಲಿ ಪೊಲೀಸ್‌ ಸ್ಟೇಷನ್ ಹೌಸ್ ಆಫೀಸರ್‌(ಎಸ್‌ಎಚ್‌ಒ) ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಪರಾರಿಯಾಗಿದ್ದ ವ್ಯಕ್ತಿಯೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಬಂಧಿಸಲಾಗಿದೆ. ಹಲ್ಲೆಗೊಳಗಾದ ಪೊಲೀಸ್ ಅಧಿಕಾರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

‌ಈ ಆರೋಪಿ ಪ್ರತಿಭಟನಾ ಸ್ಥಳದಲ್ಲಿದ್ದ ಅಧಿಕಾರಿಯೊಬ್ಬರಿಂದ ಕಾರಿನ ಕೀಲಿಯನ್ನು ಕಿತ್ತುಕೊಂಡು ಕಾರಿನಲ್ಲಿ ಪರಾರಿಯಾಗುತ್ತಿದ್ದ. ಈತನನ್ನು ಪೊಲೀಸರು ಅಟ್ಟಿಸಿಕೊಂಡು ಹೋದರು. ಆರೋಪಿ ಕಾರು ಬಿಟ್ಟು, ದ್ವಿಚಕ್ರ ವಾಹನ ಏರಿ ಪರಾರಿಯಾದ. ಈ ಆರೋಪಿಯನ್ನು ಹಿಂಬಾಲಿಸಿದ ಪೊಲೀಸರು ಮುಕಾರ್ಬ್ ಚೌಕಾ ಬಳಿ ಬಂಧಿಸಿದರು.

ಈ ಸಮಯದಲ್ಲಿ ಆರೋಪಿ ಎಸ್‌ಎಚ್‌ಒ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ. ಘಟನೆಯಲ್ಲಿ ಎಸ್‌ಎಚ್‌ಒನ ಬೆರಳು ಮತ್ತು ಕುತ್ತಿಗೆಗೆ ತೀವ್ರವಾಗಿ ಗಾಯವಾಯಿತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT