ಒಡಿಶಾ: ದೇಗುಲದ ಬಳಿ ಕಾಲ್ತುಳಿತ; ಮಹಿಳೆ ಸಾವು, ಜನರಿಗೆ ಗಾಯ

ಕಟಕ್: ಒಡಿಶಾದ ಕಟಕ್‌ನ ಶ್ರೀರಂಗನಾಥ ದೇವಾಲಯದ ಬಳಿ ಮಕರ ಮೇಳದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆಯನ್ನು ಅಂಜನಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ನಾಲ್ವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Stampede in Odisha's Cuttak: One dead, several injured at Makar Mela
Read @ANI Story | https://t.co/XwWvhpMGji#Odisha #Cuttack #OdishaStampede #Stampede pic.twitter.com/0q0R1jevEU
— ANI Digital (@ani_digital) January 14, 2023
ರಂಗನಾಥ ದೇವರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ದೇವಾಲಯದ ಆವರಣದಲ್ಲಿ ಸೂಕ್ತ ನಿರ್ವಹಣೆ ಇಲ್ಲದಿರುವುದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಮಕರ ಮೇಳಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು ಎಂದು ದೇವಾಲಯದ ಸಿಬ್ಬಂದಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.