ಜಮ್ಮು: ಉಧಮ್ಪುರ್ ನ್ಯಾಯಾಲಯದ ಹೊರಗಡೆ ಸ್ಫೋಟ, ಓರ್ವ ಸಾವು, 7 ಮಂದಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ್ ಪಟ್ಟಣದ ನ್ಯಾಯಾಲಯದ ಸಂಕೀರ್ಣದ ಹೊರಗಡೆ ನಡೆದ ಸ್ಫೋಟದಲ್ಲಿ ಓರ್ವ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
One killed, seven injured in blast outside district court complex in Jammu region's Udhampur town: officials
— Press Trust of India (@PTI_News) March 9, 2022
‘ಮಧ್ಯಾಹ್ನ 1.50ರ ಸುಮಾರಿಗೆ ನಡೆದ ಸ್ಫೋಟದಲ್ಲಿ ನಾಗರಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟರು. ಗಾಯಾಳುಗಳನ್ನು ಉಧಂಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ’ ಎಂದು ಪೊಲೀಸರು ಹೇಳಿದರು.
ಘಟನೆಯ ನಂತರ ಸ್ಥಳ ಪರಿಶೀಲನೆ ನಡೆಸಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಮ್ಮು ಎಡಿಜಿಪಿ ಮುಖೇಶ್ ಸಿಂಗ್ ‘ಉಧಂಪುರದ ಘಟನೆಯು ಸುಧಾರಿತ ಸ್ಫೋಟಕ ಸಾಮಗ್ರಿ (ಐಇಡಿ) ಸ್ಪೋಟ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಎಲ್ಲ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.