ಶನಿವಾರ, ಸೆಪ್ಟೆಂಬರ್ 25, 2021
29 °C

ತೆಲಂಗಾಣ: ಎನ್‌ಕೌಂಟರ್‌ನಲ್ಲಿ ಮಾವೋವಾದಿ ಹತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಮಾವೋವಾದಿಯೊಬ್ಬ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದರು.

‘ಭದ್ರಾದ್ರಿ ಕೊಥಗುಡೆಮ್‌ ಪ್ರದೇಶದಲ್ಲಿ ಪೊಲೀಸರ ವಿಶೇಷ ಪಡೆಯು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳಿಗ್ಗೆ 8.15ರ ಸುಮಾರಿಗೆ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಸದಸ್ಯರು ಮೊದಲು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪೊಲೀಸ್‌ ಸಿಬ್ಬಂದಿ ಪ್ರತ್ಯುತ್ತರ ನೀಡಿದ್ದಾರೆ. ಈ ವೇಳೆ ಒಬ್ಬ ಮಾವೋವಾದಿ ಮೃತಪಟ್ಟಿದ್ದಾನೆ’ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

‘ಮೃತ ಮಾವೋವಾದಿಯ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ. ಘಟನಾ ಸ್ಥಳದಿಂದ ಒಂದು .303 ರೈಫಲ್‌ ಮತ್ತು ಎರಡು ಕಿಟ್‌ ಬ್ಯಾಗ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನುಳಿದ ಮಾವೋವಾದಿಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು