ಹೈದರಾಬಾದ್:ಹಣದ ಆಸೆಗೆ ತಂದೆಯೇ ಮಾರಾಟ ಮಾಡಿದ್ದ ಕೇವಲ 1 ತಿಂಗಳ ಗಂಡು ಮಗುವನ್ನು ನಗರದಲ್ಲಿ ರಕ್ಷಿಸಲಾಗಿದ್ದು, ಮಕ್ಕಳ ಕಲ್ಯಾಣ ಇಲಾಖೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗುವನ್ನು ಮಾರಾಟ ಮಾಡಿರುವ ಸಂಬಂಧ ಮಗುವಿನ ತಾಯಿ ದೂರು ನೀಡಿದ್ದರು. ಇದಾದ ಒಂದು ವಾರದ ಬಳಿಕ ಮಗುವನ್ನು ರಕ್ಷಿಸಲಾಗಿದೆ. ವ್ಯಕ್ತಿಯೊಬ್ಬರು ಹಣದ ಆಮಿಷವೊಡ್ಡಿದ್ದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಸಿಸಿಟಿವಿದೃಶ್ಯಾವಳಿಗಳನ್ನು ಆಧರಿಸಿ ತನಿಖೆ ನಡೆಸಿ, ಮಗುವನ್ನು ಪತ್ತೆ ಹಚ್ಚಲಾಗಿದೆ. ದಂಪತಿ ನಿರ್ಗತಿಕರಾಗಿದ್ದು, ಪಾದಚಾರಿ ಮಾರ್ಗದಲ್ಲಿ ವಾಸಿಸುತ್ತಿದ್ದಾರೆ. ಸಣ್ಣಪುಟ್ಟ ಕೆಲಸ ಮತ್ತು ಭಿಕ್ಷಾಟನೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮಗುವನ್ನು ಮಕ್ಕಳ ಕಲ್ಯಾಣ ಇಲಾಖೆಯ ವಶದಲ್ಲಿರಿಸಿ ಪೋಷಿಸಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.