ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ನಲ್ಲಿ ಗೃಹ ಬಳಕೆಗೆ 300 ಯುನಿಟ್‌ ವಿದ್ಯುತ್‌ ಉಚಿತ: ಜುಲೈ 1ರಿಂದ ಜಾರಿ

Last Updated 16 ಏಪ್ರಿಲ್ 2022, 4:15 IST
ಅಕ್ಷರ ಗಾತ್ರ

ನವದೆಹಲಿ: ಪಂಜಾಬ್‌ನಲ್ಲಿ ಜುಲೈ 1ರಿಂದ ಗೃಹ ಬಳಕೆಗಾಗಿ 300 ಯೂನಿಟ್‌ಗಳ ಉಚಿತ ವಿದ್ಯುತ್‌ ಪೂರೈಸುವುದಾಗಿ ಭಗವಂತ ಮಾನ್‌ ನೇತೃತ್ವದ ಆಮ್‌ ಆದ್ಮಿ ಪಕ್ಷ (ಎಎಪಿ)ದ ಸರ್ಕಾರ ಶನಿವಾರ ಘೋಷಣೆ ಮಾಡಿದೆ.

ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದು 30 ದಿನ ಪೂರೈಸಿರುವ ಎಎಪಿ ಸರ್ಕಾರ ಇಂದು ಮಹತ್ವದ ಘೋಷಣೆ ಮಾಡಿದೆ.

ಚುನಾವಣೆಯಲ್ಲಿ ಎಎಪಿ ನೀಡಿದ್ದ ಪ್ರಮುಖ ಆಶ್ವಾಸನೆಗಳಲ್ಲಿ ಉಚಿತ ವಿದ್ಯುತ್‌ ಕೂಡ ಒಂದಾಗಿತ್ತು.

ಬಹುತೇಕ ಎಲ್ಲಾ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಎಎಪಿ ಸರ್ಕಾರ ಜಾಹೀರಾತು ನೀಡಿದ್ದು, ಉಚಿತ ವಿದ್ಯುತ್ ಘೋಷಿಸಲಾಗಿದೆ. ಭ್ರಷ್ಟಾಚಾರ ವಿರೋಧಿ ಸಹಾಯವಾಣಿಯನ್ನೂ ಜಾಹೀರಾತಿನಲ್ಲಿ ಎತ್ತಿತೋರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT