ಒಂದು ರಾಷ್ಟ್ರ, ಒಂದು ಚುನಾವಣೆ ಸಾಧ್ಯವಿಲ್ಲ: ಡಿಎಂಕೆ

ಬೆಂಗಳೂರು: ಒಂದು ರಾಷ್ಟ್ರ, ಒಂದು ಚುನಾವಣೆ ಎನ್ನುವುದು ಕಾರ್ಯಸಾಧುವಲ್ಲ. ಅದರಿಂದ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ತಮಿಳುನಾಡಿನ ಆಡಳಿತ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ)ನ ನಾಯಕ ಎಂ. ಕೆ. ಸ್ಟಾಲಿನ್ ಹೇಳಿದ್ದಾರೆ.
ಡಿಎಂಕೆ ಮುಖವಾಣಿ ಮುರಸೋಲಿಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆಯ ಕುರಿತು ಪಕ್ಷದ ನಿಲುವನ್ನು ಪ್ರಕಟಿಸಲಾಗಿದೆ.
ಬಿಜೆಪಿ, ಎಲ್ಲ ವಿಚಾರಗಳಲ್ಲೂ ಒಂದೇ ಎನ್ನುವ ಪರಿಕಲ್ಪನೆಯನ್ನು ತರಲು ಯತ್ನಿಸುತ್ತಿದೆ. ಪ್ರಾದೇಶಿಕ ವೈವಿಧ್ಯತೆ ಮತ್ತು ಭಿನ್ನತೆಗಳಿದ್ದರೂ, ಅವುಗಳನ್ನು ಗೌರವಿಸುತ್ತಿಲ್ಲ. ಒಂದೇ ರಾಷ್ಟ್ರ, ಒಂದೇ ಭಾಷೆ, ಒಂದೇ ಸಂಸ್ಕೃತಿ ಎನ್ನುತ್ತಾ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ. ರಾಜಕೀಯ ಲಾಭ ಪಡೆಯಲು ಈ ರೀತಿಯ ತಂತ್ರಗಳನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ.
ರಾಜ್ಯಗಳಲ್ಲಿ ಅಧಿಕಾರ ಪಡೆಯುವುದು ಬಿಜೆಪಿ ಗುರಿಯಾಗಿದೆ. ಅದಕ್ಕಾಗಿ ಶಾಸಕರನ್ನು ಖರೀದಿಸುವಂತಹ, ಪ್ರಜಾಪ್ರಭುತ್ವ ಮತ್ತು ಮತದಾನದ ಪದ್ಧತಿಗೆ ವಿರುದ್ಧವಾದ ತಂತ್ರಗಳನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ.
ತಮಿಳುನಾಡು ಹೆಸರು ಬದಲಾವಣೆ ಸೂಚಿಸಿರಲಿಲ್ಲ: ರಾಜ್ಯಪಾಲ ಆರ್.ಎನ್.ರವಿ ಸ್ಪಷ್ಟನೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.