ಶನಿವಾರ, ಆಗಸ್ಟ್ 13, 2022
26 °C

'ಒಂದು ದೇಶ, ಒಂದು ಫೋಟೊ' - ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಪ್ರಚಾರದಲ್ಲೂ ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ಬಳಕೆ ಮಾಡಿರುವುದನ್ನು ಪ್ರಶ್ನಿಸಿರುವ ಕಾಂಗ್ರೆಸ್, 'ಒಂದು ದೇಶ, ಒಂದು ಫೋಟೊ' ಎಂದು ವ್ಯಂಗ್ಯವಾಡಿದೆ.

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಲು ಹಾಕಿದ್ದ ಬಿಜೆಪಿ ಪೋಸ್ಟರ್‌ನಲ್ಲಿ, ಪ್ರಧಾನಿ ಮೋದಿ ಅವರ ಚಿತ್ರ ಬಳಕೆಯಾಗಿದೆ.

ಇದನ್ನೂ ಓದಿ: 

ಈ ಸಂಬಂಧ ಮೋದಿ ಹಾಗೂ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಒನ್ ನೇಷನ್, ಒನ್ ಫೋಟೊ' ಎಂದು ಟ್ವೀಟಿಸಿದ್ದಾರೆ.

 

 

 

ಕೋವಿಡ್-19 ಲಸಿಕೆ ಪ್ರಮಾಣಪತ್ರದಲ್ಲೂ ಪ್ರಧಾನಿಯವರ ಫೋಟೊ ಹಾಕಿದ್ದನ್ನು ಪ್ರಶ್ನಿಸಿದ್ದ ಕಾಂಗ್ರೆಸ್, ಕೇರಳ ಹೈಕೋರ್ಟ್ ಮೆಟ್ಟಿಲೇರಿತ್ತು. ಬಳಿಕ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು.

 

ಸೋಮವಾರ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಡೀ ಜಗತ್ತು ಕೋವಿಡ್-19 ಲಿಸಿಕಾ ಪ್ರಮಾಣಪತ್ರವನ್ನು ತ್ವರಿತಗತಿಯಲ್ಲಿ ವಿತರಿಸಲು ಭಾರತಕ್ಕೆ ಹೇಗೆ ಸಾಧ್ಯವಾಯಿತು ಎಂದು ಚರ್ಚಿಸುತ್ತಿರುವಾಗ, ಇಲ್ಲಿ ಕೆಲವರು ಪ್ರಮಾಣಪತ್ರದಲ್ಲಿ ನನ್ನ ಚಿತ್ರ ಏಕೆ ಕಾಣಿಸಿಕೊಂಡಿದೆ ಎಂಬುದರ ಬಗ್ಗೆ ತಲೆಕೆಡಿಸಿಕೊಂಡಿದ್ದರು ಎಂದು ತಿರುಗೇಟು ನೀಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು