ಭೋಪಾಲ್: ಕಳೆದ ವರ್ಷ ನಮೀಬಿಯಾದಿಂದ ತರಲಾಗಿದ್ದ ಎಂಟು ಚೀತಾಗಳ ಪೈಕಿ ‘ಸಾಷಾ’ ಹೆಸರಿನ ಹೆಣ್ಣು ಚೀತಾ ಸೋಮವಾರ ಮೃತಪಟ್ಟಿದೆ.
ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಐದೂವರೆ ವರ್ಷದ ಚೀತಾಗೆ ಡೆಹ್ರಾಡೂನ್ ವೈಲ್ಡ್‌ಲೈಫ್ ಇನ್ಸಿಟ್ಯೂಟ್ ಆಫ್ ಇಂಡಿಯಾದ ವಿಜ್ಞಾನಿಗಳು ಹಾಗೂ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದ ತಜ್ಞರ ಜತೆ ಸಮಾಲೋಚನೆ ನಡೆಸಿ ಪಶುವೈದ್ಯರು ಚಿಕಿತ್ಸೆ ನೀಡಿದ್ದರು.
ಈ ಚೀತಾ, ಭಾರತಕ್ಕೆ ತರುವ ಮೊದಲೇ ಮೂತ್ರಪಿಂಡ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿತ್ತು ಎಂದು ಮಧ್ಯಪ್ರದೇಶ ಅರಣ್ಯ ಇಲಾಖೆ ತಿಳಿಸಿದೆ.
'ಚೀತಾ ಯೋಜನೆ'ಯಡಿ ಕಳೆದ ವರ್ಷ ನಮೀಬಿಯಾದಿಂದ ತರಲಾಗಿದ್ದ ಎಂಟು ಚೀತಾಗಳನ್ನು ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗಿತ್ತು.
ಆರಂಭದಲ್ಲಿ ಎಲ್ಲವನ್ನೂ ಕ್ವಾರಂಟೈನ್‌ನಲ್ಲಿರಿಸಿ ನಿಗಾ ಇಡಲಾಗಿತ್ತು. ನಂತರ ನವೆಂಬರ್‌ನಲ್ಲಿ ಅರಣ್ಯಕ್ಕೆ ಬಿಡಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.