ಬುಧವಾರ, ಡಿಸೆಂಬರ್ 7, 2022
22 °C

ಗುಜರಾತ್‌, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಗೆಲ್ಲಲೆಂದು ಬಯಸುವೆ: ಆಜಾದ್‌

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಶ್ರೀನಗರ: ಗುಜರಾತ್‌ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲೆಂದು ನಾನು ಈಗಲೂ ಬಯಸುತ್ತೇನೆ ಎಂದು ಹೇಳುವ ಮೂಲಕ ‘ಡೆಮಾಕ್ರಟಿಕ್ ಆಜಾದ್ ಪಾರ್ಟಿ’ಯ ಸಂಸ್ಥಾಪ ಗುಲಾಂ ನಬಿ ಆಜಾದ್‌ ಅಚ್ಚರಿ ಮೂಡಿಸಿದ್ದಾರೆ.

ಗುಲಾಂ ನಬಿ ಆಜಾದ್‌ ಅವರು ಇತ್ತೀಚೆಗೆ ಕಾಂಗ್ರೆಸ್‌ ತೊರೆದು ಹೊಸ ಪಕ್ಷ ಸ್ಥಾಪನೆ ಮಾಡಿದ್ದರು. ಕಾಂಗ್ರೆಸ್‌ನ ವಿರುದ್ಧ ಹಲವು ಟೀಕೆಗಳನ್ನು ಮಾಡಿದ್ದ ಅವರು ಇದೀಗ ಗುಜರಾತ್‌, ಹಿಮಾಚಲ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಮಾತೃ ಪಕ್ಷದ ಪರ ಮಾತನಾಡಿದ್ದಾರೆ.

ಭಾನುವಾರ ಶ್ರೀನಗರದಲ್ಲಿ ಮಾತನಾಡಿರುವ ಅವರು, ’ನಾನು ಕಾಂಗ್ರೆಸ್‌ನಿಂದ ಬೇರ್ಪಟ್ಟಿದ್ದರೂ ಎಂದೂ ಅದರ ಜಾತ್ಯತೀತ ಸಿದ್ಧಾಂತದ ವಿರುದ್ಧ ಇರಲಿಲ್ಲ. ಪಕ್ಷದ ವ್ಯವಸ್ಥೆ ದುರ್ಬಲವಾಗುತ್ತಿದ್ದರಿಂದ ನಾನು ಬೇರ್ಪಟ್ಟೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ ನೀಡಬೇಕೆಂದು ನಾನು ಬಯಸುತ್ತೇನೆ. ಅಲ್ಲಿ ಆಮ್‌ ಆದ್ಮಿ ಪಕ್ಷ (ಎಎಪಿ) ಗೆಲ್ಲಲು ಸಾಧ್ಯವಿಲ್ಲ ಎಂದು ಗುಲಾಂ ನಬಿ ಆಜಾದ್ ಹೇಳಿದ್ದಾರೆ.

‘ಎಎಪಿಯು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಪಕ್ಷ ಮಾತ್ರ. ಅವರು ಪಂಜಾಬ್ ಅನ್ನು ಸಮರ್ಥವಾಗಿ ನಡೆಸಲು ಸಾಧ್ಯವಿಲ್ಲ. ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಸವಾಲು ಹಾಕಲು ಕಾಂಗ್ರೆಸ್ ಮಾತ್ರ ಸಾಧ್ಯ, ಏಕೆಂದರೆ ಎಲ್ಲರನ್ನೂ ಒಳಗೊಳ್ಳುವ ನೀತಿಯನ್ನು ಕಾಂಗ್ರೆಸ್‌ ಹೊಂದಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು