ರೈತ ಧರಣಿ ನಿಲ್ಲಿಸಲು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದೊಂದೇ ಮಾರ್ಗ: ಕಾಂಗ್ರೆಸ್

ನವದೆಹಲಿ: ಕೇಂದ್ರ ಸರ್ಕಾರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯುವುದೊಂದೇ ರೈತರ ಪ್ರತಿಭಟನೆಯನ್ನು ಕೊನೆಗೊಳಿಸಲು ಇರುವ ಏಕೈಕ ಮಾರ್ಗ ಎಂದು ಕಾಂಗ್ರೆಸ್ ಬುಧವಾರ ಹೇಳಿದೆ.
ಸರ್ಕಾರ ಮೊಂಡುತನವನ್ನು ಬಿಟ್ಟು ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.
‘ಕೃಷಿಭೂಮಿಯ ರಕ್ಷಣೆಗಾಗಿ 500ಕ್ಕೂ ಹೆಚ್ಚು ರೈತರು ಸಾವನ್ನಪಿದ್ದಾರೆ. ಆದರೆ, ಅವರು ಹೆದರುವುದಿಲ್ಲ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಕಳೆದ ಆರು ತಿಂಗಳಿನಿಂದ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಆಂದೋಲನಕ್ಕೆ ರಾಹುಲ್ ಗಾಂಧಿ ಬೆಂಬಲ ಸೂಚಿಸಿದ್ದಾರೆ.
‘ಪ್ರತಿಭಟನಾ ನಿರತ ರೈತರು ಭಿಕ್ಷೆ ಬೇಡುತ್ತಿಲ್ಲ. ಅವರ ಹಕ್ಕುಗಳನ್ನು ಕೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ರೈತರ ಬೇಡಿಕೆಗಳಿಗೆ ಸ್ಪಂದಿಸಬೇಕು’ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಆಗ್ರಹಿಸಿದ್ದಾರೆ.
ಇದನ್ನೂ ಓದಿ... ಅಣಕು ಕಾರ್ಯಾಚರಣೆ ಎಡವಟ್ಟು: ಸಿಎಂ ಯೋಗಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
खेत-देश की रक्षा में
तिल-तिल मरे हैं किसान
पर ना डरे हैं किसान
आज भी खरे हैं किसान।#500DeathsAtFarmersProtest— Rahul Gandhi (@RahulGandhi) June 9, 2021
किसान को भीख नही, न्याय चाहिए ।
किसान को अहंकार नही, अधिकार चाहिए ।
घमंड के सिंहासन से उतरिए, राजहठ छोड़िए,
तीनों काले क़ानून ख़त्म करना ही एकमात्र रास्ता है#FarmersProtest https://t.co/43ufwilrWT— Randeep Singh Surjewala (@rssurjewala) June 9, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.